Breaking News
Home / Uncategorized / ಹೆಲ್ಮೆಟ್ ಧರಿಸಿಲ್ಲವೆಂದು ಲಾರಿ ಚಾಲಕನಿಗೆ ದಂಡ ಹಾಕಿದ ಪೊಲೀಸರು!

ಹೆಲ್ಮೆಟ್ ಧರಿಸಿಲ್ಲವೆಂದು ಲಾರಿ ಚಾಲಕನಿಗೆ ದಂಡ ಹಾಕಿದ ಪೊಲೀಸರು!

Spread the love

ಕಾರವಾರ, : ಟಿಪ್ಪರ್ ಲಾರಿ ಚಾಲಕರೊಬ್ಬರಿಗೆ ಹೆಲ್ಮೆಟ್​ ಧರಿಸಿಲ್ಲವೆಂದು ಹೊನ್ನಾವರ ಸಂಚಾರ ಠಾಣೆ ಪೊಲೀಸರು (honnavar traffic Police) ವಿಥೌಟ್​ ಹೆಲ್ಮೆಟ್ ದಂಡ ಹಾಕಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ.ವಿಚಿತ್ರ ಘಟನೆ: ಹೆಲ್ಮೆಟ್ ಧರಿಸಿಲ್ಲವೆಂದು ಲಾರಿ ಚಾಲಕನಿಗೆ ದಂಡ ಹಾಕಿದ ಪೊಲೀಸರು!

ಚಂದ್ರಕಾಂತ್ ಹಳ್ಳೇರ ಎನ್ನುವರು ಮರಳು ತುಂಬಿದ ಟಿಪ್ಪರ್ ಲಾರಿಯನ್ನು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಹೊನ್ನಾವರ ಸಂಚಾರಿ ಪೊಲೀಸರು, ಅಳ್ಳಂಕಿ ಎಂಬಲ್ಲಿ ತಡೆದು 500 ರೂಪಾಯಿ ದಂಡ ಹಾಕಿ ರಶೀದಿ ನೀಡಿದ್ದಾರೆ. ಬಳಿಕ ಚಾಲಕ ರಶೀದಿಯನ್ನು ನೋಡಿ ಒಂದು ಕ್ಷಣ ಶಾಕ್ ಆಗಿದ್ದಾರೆ. ಯಾಕಂದ್ರೆ ರಶೀದಿಯಲ್ಲಿ ಹಾಕಿರುವ ದಂಡ ವಿಥೌಟ್​ ಹೆಲ್ಮೆಟ್​ಗೆ. ಈ ಬಗ್ಗೆ ಚಾಲಕ ಚಂದ್ರಕಾಂತ್, ಸರ್ ನಾನು ಬೈಕ್ ಓಡಿಸುತ್ತಿಲ್ಲ.

ಟಿಪ್ಪರ್​ ಚಾಲನೆ ಮಾಡುತ್ತೇನೆ ಎಂದು ಪೊಲೀಸರನ್ನ ಪ್ರಶ್ನಿಸಿದ್ದಾರೆ. ಹೇ ಅದೆಲ್ಲಾ ಇರುತ್ತೆ ಎಂದು ಹೇಳಿ ರಶೀದಿ ಕೊಟ್ಟು ಕಳುಹಿಸಿದ್ದಾರೆ.ಮಾವಿನ ಖುರ್ವದ ವಿನುತಾ ವಿನೋದ್ ನಾಯ್ಕ ಎಂಬುವವರಿಗೆ ಸೇರಿದ ಟಿಪ್ಪರ್ ಲಾರಿಗೆ ಚಂದ್ರಕಾಂತ್ ಹಳ್ಳೇರ ಚಾಲಕರಾಗಿದ್ದು, ಇಂದು ಮರಳು ತುಂಬಿದ ಲಾರಿಯನ್ನು ಚಾಲನೆ ಮಾಡಿಕೊಂಡು ಹೋಗುವಾಗ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಅಳ್ಳಂಕಿ ಎಂಬಲ್ಲಿ ಪೊಲೀಸರು ಅಡ್ಡಹಾಕಿದ್ದಾರೆ.

 

ಈ ವೇಳೆ ಸಮವಸ್ತ್ರ ಧರಿಸದಕ್ಕೆ ದಂಡ ಹಾಕುವ ಬದಲು ಹೆಲ್ಮೆಟ್ ಧರಿಸಿಲ್ಲ ಎಂದು ದಂಡ ಹಾಕಿ ಎಡವಟ್ಟು ಮಾಡಿಕೊಂಡಿದ್ದಾರೆ. ಇದೀಗ ದಂಡದ ರಶೀದಿ ಎಲ್ಲೆಡೆ ವೈರಲ್ ಆಗಿದೆ.


Spread the love

About Laxminews 24x7

Check Also

ಸರ್ಕಾರಿ ನೌಕರರಿಗೆ ಹೊಸ ಭರಸೆ ಕೊಟ್ಟ ಡಿಸಿಎಂ

Spread the love ಬೆಂಗಳೂರು, ಜೂನ್‌ 17: ಕರ್ನಾಟಕದ ಸರ್ಕಾರಿ ನೌಕರರು, ನಿವೃತ್ತ ನೌಕರರು ಕೆ. ಸುಧಾಕರ್‌ ರಾವ್ ನೇತೃತ್ವದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ