ಮೈಸೂರು, ಮೇ.26: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಸರೋದ್ ವಾದಕ ರಾಜೀವ್ ತಾರಾನಾಥ್(Rajeev Taranath)ರವರು ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಹಿನ್ನೆಲೆ ಇಂದು(ಮೇ.26) ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ(H.C Mahadevappa) ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ವಿಶ್ವ ಶ್ರೇಷ್ಠ ಸರೋದ್ ವಾದಕರಾಗಿರುವ ಪದ್ಮಶ್ರೀ ಪಂಡಿತ್ ರಾಜೀವ್ ತಾರಾನಾಥ್ ಅವರು ಶೀಘ್ರ ಚೇತರಿಕೆಗೆ ಆಗಲೆಂದು ಶುಭ ಹಾರೈಸಿದರು.
ಆರೋಗ್ಯದ ಕುರಿತು ವೈದ್ಯರಿಂದ ಮಾಹಿತಿ
ಇನ್ನು ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜೀವ್ ತಾರನಾಥ್ ಅವರ ಆರೋಗ್ಯದ ಕುರಿತು ವೈದ್ಯರು ಹಾಗೂ ಕುಟುಂಬದ ಸದಸ್ಯರಿಂದ ಮಾಹಿತಿ ಪಡೆದರು. ಮಹದೇವಪ್ಪಗೆ ಮೈಸೂರು ಜಿಲ್ಲಾ ಕಾಂಗ್ರೆಸ್ ಘಟಕದ ಸಾಂಸ್ಕೃತಿಕ ಸಮಿತಿ ಅಧ್ಯಕ್ಷೆ ಡಾ.ಶ್ವೇತಾ ಮಡಪ್ಪಾಡಿ ಮತ್ತಿತರರು ಸಾಥ್ ನೀಡಿದರು.
Laxmi News 24×7