Breaking News

ಭೀಕರ ರಸ್ತೆ ಅಪಘಾತ; ಬಿತ್ತನೆ ಬೀಜ ಖರೀದಿಸಲು ಬಂದಿದ್ದ ರೈತರಿಬ್ಬರು ಸ್ಥಳದಲ್ಲೇ ಮೃತ್ಯು

Spread the love

ದಗ: ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ರೈತರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಹಳ್ಳಿಗುಡಿ ಗ್ರಾಮದ ರೈತ ಪರಸಪ್ಪ ಜೋಗಿನ ಹಾಗೂ ಪೇಠಾಲೂರ ಗ್ರಾಮದ ಮಾರುತಿ ಯಾಟಿ ಎಂದು ಗುರುತಿಸಲಾಗಿದೆ.

ಭೀಕರ ರಸ್ತೆ ಅಪಘಾತ; ಬಿತ್ತನೆ ಬೀಜ ಖರೀದಿಸಲು ಬಂದಿದ್ದ ರೈತರಿಬ್ಬರು ಸ್ಥಳದಲ್ಲೇ ಮೃತ್ಯು

ಬಿತ್ತನೆ ಬೀಜ ಖರೀದಿಗಾಗಿ ಇಬ್ಬರು ರೈತರು ಮುಂಡರಗಿಗೆ ಬಂದಿದ್ದರು ಖರೀದಿ ಮುಗಿಸಿ ತಮ್ಮ ಊರಿನತ್ತ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕೊಪ್ಪಳ ದಿಂದ ಗದಗ ಕಡೆಗೆ ಬರುತ್ತಿದ್ದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ ಪರಿಣಾಮ ಇಬ್ಬರು ರೈತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಶಿವಾಜಿನಗರದಲ್ಲಿ GBA ಅಧಿಕಾರಿಗಳ ಮೇಲೆ ಹಲ್ಲೆ; ಬೆಳಗ್ಗೆಯೇ ದಾಳಿ ಪ್ಲಾನ್, 11 ಮಂದಿ ಅರೆಸ್ಟ್

Spread the loveಬೆಂಗಳೂರು: ಶಿವಾಜಿನಗರದಲ್ಲಿ  ಫುಟ್‌ಪಾತ್ ತೆರವು ಕಾರ್ಯಾಚರಣೆ ವೇಳೆ GBA ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ