Breaking News

ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ ; ಮೇ.‌ 31 ಕ್ಕೆ ಎಸ್ಐಟಿ ಮುಂದೆ ಹಾಜರಾಗುವ ನಿರ್ಧಾರ

Spread the love

ಬೆಂಗಳೂರು : ಅಶ್ಲೀಲ ವೀಡಿಯೋ ವಿಚಾರವಾಗಿ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಧ್ಯ ಪ್ರತ್ಯಕ್ಷವಾಗಿದ್ದು, ಬರುವ ಮೇ. 31 ರಂದು ಎಸ್ಐಟಿ ಮುಂದೆ ಹಾಜರಾಗುವೆ ಎಂದು ಹೇಳಿದ್ದಾರೆ.

ಈ ಕುರಿತು ವೀಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಪ್ರಜ್ವಲ್ ರೇವಣ್ಣ. ಪೂರ್ವ ನಿಗದಿತ ಪ್ರವಾಸದ ಹಿನ್ನಲೆಯಲ್ಲಿ ನಾನು ಚುನಾವಣೆ ನಂತರ ವಿದೇಶಿ ಪ್ರವಾಸಕ್ಕೆ ಹೊರಟಿದ್ದೆ. ಇದಾದ ನಂತರ ನಾಲ್ಕು ದಿನಗಳಾದ ಮೇಲೆ ನನ್ನ ಮೇಲೆ ಪ್ರಕರಣ ದಾಖಲಾಗಿದ್ದು ತಿಳಿದುಬಂದಿದೆ.

 

ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ ; ಮೇ.‌ 31 ಕ್ಕೆ ಎಸ್ಐಟಿ ಮುಂದೆ ಹಾಜರಾಗುವ ನಿರ್ಧಾರ

 

ನನ್ನ ವಿರುದ್ಧ ರಾಜಕೀಯ ಪಿತೂರಿ ಮಾಡಲಾಗಿದೆ. ನನ್ನ ವಿರುದ್ಧ ದಾಖಲಾಗಿದ್ದು ಎಲ್ಲಾ ಸುಳ್ಳು ಪ್ರಕರಣದ ಕುರಿತು ನ್ಯಾಯಾಲಯದಿಂದಲೇ ಹೊರಬರುವೆ. ಕಾನೂನಿಗೆ ಗೌರವ ನೀಡುತ್ತೇನೆ ಎಂದು ಹೇಳಿದ್ದಾರೆ.

ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಕಾನೂನು ಕ್ರಮ ಎದುರಿಸಲಿದ್ದೇನೆ. ನನ್ನ ತಂದೆ – ತಾಯಿ ಹಾಗೂ ತಾತನ ಕ್ಷಮೆ ಕೇಳುತ್ತೇನೆ.‌ಹಾಗೆಯೇ ಪಕ್ಷದ ಕಾರ್ಯಕರ್ತರ ಕ್ಷಮೆಯಾಚಿಸುವುದಾಗಿ ಹೇಳಿದ್ದಾರೆ.


Spread the love

About Laxminews 24x7

Check Also

ಶಿವಾಜಿನಗರದಲ್ಲಿ GBA ಅಧಿಕಾರಿಗಳ ಮೇಲೆ ಹಲ್ಲೆ; ಬೆಳಗ್ಗೆಯೇ ದಾಳಿ ಪ್ಲಾನ್, 11 ಮಂದಿ ಅರೆಸ್ಟ್

Spread the loveಬೆಂಗಳೂರು: ಶಿವಾಜಿನಗರದಲ್ಲಿ  ಫುಟ್‌ಪಾತ್ ತೆರವು ಕಾರ್ಯಾಚರಣೆ ವೇಳೆ GBA ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ