ಹುಬ್ಬಳ್ಳಿ : ರೈಲಿಗೆ ತಲೆಕೊಟ್ಟು ಕಾನ್ಸ್ ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಮೃತರನ್ನು ನಾಗರಾಜ ಹಂಚಿನಮನಿ (48) ಎಂದು ಗುರುತಿಸಲಾಗಿದೆ. ನಾಗರಾಜ ಹಂಚಿನಮನಿ ಅವರು ಹುಬ್ಬಳ್ಳಿಯ ಲಿಂಗರಾಜ ನಗರದ ಟ್ರಾಫಿಕ್ ಪೊಲೀಸ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಉಣಕಲ್ ಹತ್ತಿರ ಅವರು ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
Laxmi News 24×7