Breaking News

ಸ್ಮಾರ್ಟ್ ಸಿಟಿ ಕಾಮಗಾರಿ ಶೀಘ್ರ ಪೂರ್ಣಗೊಳಿಸದಿದ್ದರೆ ಗುತ್ತಿಗೆದಾರರ ವಿರುದ್ದ ಕ್ರಿಮಿನಲ್ ಕೇಸ್..!

Spread the love

ಬೆಂಗಳೂರು,ನ.- ಸ್ಮಾರ್ಟ್ ಯೋಜನೆಯಡಿ ಬೆಂಗಳೂರಿನಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸದಿದ್ದರೆ ಅಂತಹ ಗುತ್ತಿಗೆದಾರರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ್ ಎಚ್ಚರಿಕೆ ನೀಡಿದ್ದಾರೆ. ನಗರದ ಬೇರೆ ಬೇರೆ ಇಂದು ಕಾಮಗಾರಿ ನಡೆಯುತ್ತಿರುವ ಪ್ರದೇಶಗಳಲ್ಲಿ ಭೇಟಿ ಕೊಟ್ಟು ನಂತರ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಡಿಫೆನ್ಸ್‍ರಸ್ತೆಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಹಲವು ಬಾರಿ ಎಚ್ಚರಿಕೆ ನೀಡಲಾಗಿತ್ತು. ಆದರೆ ಅವರು ಈವರೆಗೂ ಕಾಮಗಾರಿಯನ್ನು ಪೂರ್ಣಗೊಳಿಸಿಲ್ಲ.ಹೀಗಾಗಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೆತ್ತಿಕೊಂಡಿರುವ ಕಾಮಗಾರಿಗಳಲ್ಲಿ ಗುಣಮಟ್ಟದಿಂದ ಕೂಡಿರಬೇಕು. ಒಂದು ವೇಳೆ ಕಳಪೆಯಿಂದ ಕೂಡಿದ್ದರೆ ಅಂತಹ ಗುತ್ತಿಗೆದಾರರ ವಿರುದ್ದವೂ ಕ್ರಿಮಿನಲ್ ಮೊಕದ್ದಮ್ಮೆ ದಾಖಲಿಸಲು ಹಿಂದೆಮುಂದೆ ನೋಡುವುದಿಲ್ಲ ಎಂದು ಎಚ್ಚರಿಕೆ ಕೊಟ್ಟರು.


Spread the love

About Laxminews 24x7

Check Also

ಇಟ್ಟಿಗೆ ತುಂಬಿದ ಟ್ರ‍್ಯಾಕ್ಟರ್ -‌ ಟ್ರೇಲರ್ ಮಧ್ಯೆ ಸಿಲುಕಿ ಚಾಲಕ ದುರ್ಮರಣ

Spread the loveಹಾವೇರಿ: ಇಟ್ಟಿಗೆ ತುಂಬಿದ ಟ್ರ‍್ಯಾಕ್ಟರ್  ಮತ್ತು ಟ್ರೇಲರ್ ನಡುವೆ ಸಿಲುಕಿ ಚಾಲಕ  ಸಾವನ್ನಪ್ಪಿರುವ ಘಟನೆ ಹಾವೇರಿ  ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ