Breaking News

ಏರ್‌ಪೋರ್ಟ್‌ನಲ್ಲಿ ಪ್ರಜ್ವಲ್‌ಗೆ “ಸ್ವಾಗತಿ’ಸಲು ಎಸ್‌ಐಟಿ ಸಿದ್ದತೆ !

Spread the love

ಬೆಂಗಳೂರು: ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಿಲುಕಿರುವ ಸಂಸದ ಪ್ರಜ್ವಲ್‌ ರೇವಣ್ಣ ಅವರು ವಿದೇಶದಿಂದ ಆಗಮಿಸುತ್ತಿದ್ದಂತೆ ಅವರನ್ನು ವಶಕ್ಕೆ ಪಡೆಯಲು ಎಸ್‌ಐಟಿ ಸಿದ್ಧತೆ ನಡೆಸುತ್ತಿದೆ. ಮೇ 31ರಂದು ವಿದೇಶದಿಂದ ಮರಳುವುದಾಗಿ ಅಜ್ಞಾತ ಸ್ಥಳದಿಂದ ಪ್ರಜ್ವಲ್‌ ವಿಡಿಯೋ ಹರಿಯ ಬಿಟ್ಟ ಕೂಡಲೇ ಎಸ್‌ಐಟಿಯು ಅಲರ್ಟ್‌ ಆಗಿದೆ.

Pen Drive Case; ಏರ್‌ಪೋರ್ಟ್‌ನಲ್ಲಿ ಪ್ರಜ್ವಲ್‌ಗೆ "ಸ್ವಾಗತಿ'ಸಲು ಎಸ್‌ಐಟಿ ಸಿದ್ದತೆ !

ಏರ್‌ಪೋರ್ಟ್‌ಗೆ ಪ್ರಜ್ವಲ್‌ ಕಾಲಿಡುತ್ತಿದ್ದಂತೆ ಬಂಧಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಎಸ್‌ಐಟಿ ಹಾಗೂ ಗುಪ್ತಚರ ಇಲಾಖೆ ಅಧಿಕಾರಿಗಳು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ನಿಗಾ ವಹಿಸಿದ್ದಾರೆ.

ಕಾನೂನು ತಜ್ಞರ ಜೊತೆಗೆ ಚರ್ಚೆ: ಪ್ರಜ್ವಲ್‌ ಆಗಮಿಸುತ್ತಿದ್ದಂತೆಯೇ ಬಂಧನದ ಬಳಿಕ ಮುಂದಿನ ಕಾನೂನು ಪ್ರಕ್ರಿಯೆಗಳ ಬಗ್ಗೆ ಕಾನೂನು ತಜ್ಞರ ಜೊತೆಗೆ ಎಸ್‌ಐಟಿ ಅಧಿಕಾರಿಗಳು ಮಾತುಕತೆ ನಡೆಸಿದ್ದಾರೆ. ಪ್ರಜ್ವಲ್‌ ಯಾವ ವಿಮಾನದಲ್ಲಿ ಬರುತ್ತಾರೆ ? ಯಾವ ನಿಲ್ದಾಣಕ್ಕೆ ಬರುತ್ತಾರೆ ? ಎಂಬುದನ್ನೂ ಗಮನಿಸಲಾಗುತ್ತಿದೆ. ಈಗಾಗಲೇ ಜರ್ಮನಿಯಿಂದ ಬೆಂಗಳೂರಿಗೆ ಈ ಹಿಂದೆ ಟಿಕೆಟ್‌ ಬುಕ್‌ ಮಾಡಿ ಕೊನೆ ಕ್ಷಣದಲ್ಲಿ ರದ್ದುಪಡಿಸಿದ್ದರು. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಪ್ರಜ್ವಲ್‌ ಸಂಪರ್ಕಕ್ಕೂ ಪ್ರಯತ್ನಿಸುತ್ತಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳಿಗೂ ಈ ಬಗ್ಗೆ ಮಾಹಿತಿ ನೀಡಿ ಇಂಟರ್‌ಪೋಲ್ ನಿಂದ ಮಾಹಿತಿ ಪಡೆದುಕೊಳ್ಳುವ ಸಾಧ್ಯತೆಗಳಿವೆ.


Spread the love

About Laxminews 24x7

Check Also

ರಾಯಬಾಗ: ರೇಬಿಸ್ ಲಸಿಕಾ ಅಭಿಯಾನಕ್ಕೆ ಚಾಲನೆ

Spread the love ರಾಯಬಾಗ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ರಾಮಕೃಷ್ಣ ಪಬ್ಲಿಕ್ ಸ್ಕೂಲ್ ಬೆಕ್ಕೇರಿ ಇವರ ಸಹಯೋಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ