Breaking News

ಸರ್ಕಾರದ ಕಮಿಷನ್‌ ದಾಹಕ್ಕೆ ಅಧಿಕಾರಿ ಬಲಿ: ಬಿಜೆಪಿ

Spread the love

ಬೆಂಗಳೂರು: ಶಿವಮೊಗ್ಗದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿರುವ ಬಿಜೆಪಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆ ಸಚಿವ ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡುವಂತೆ ಆಗ್ರಹಿಸಿದೆ.

ಸರ್ಕಾರದ ಕಮಿಷನ್‌ ದಾಹಕ್ಕೆ ಅಧಿಕಾರಿ ಬಲಿ: ಬಿಜೆಪಿ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್‌, ಡೆತ್‌ ನೋಟ್‌ನಲ್ಲಿ ನಿಗಮದ ಎಂ.ಡಿ. ಪದ್ಮನಾಭ ಹಾಗೂ ಇನ್ನೊಬ್ಬ ಅಧಿಕಾರಿ ಹೆಸರನ್ನು ಬರೆದಿದ್ದು, ಈ ಇಲಾಖೆಯ ಸಚಿವರ ಮೌಖೀಕ ಆದೇಶದ ಪ್ರಕಾರ ಇಷ್ಟೆಲ್ಲ ಮಾಡಬೇಕಾಗಿದೆ ಎಂದು ಆರೋಪಿಸಿದ್ದಾರೆ. ಪರಿಶಿಷ್ಟ ಪಂಗಡದ ಬಡವರಿಗೆ ಸೇರಬೇಕಿದ್ದ 187 ಕೋಟಿ ರೂ.ಗಳನ್ನು ಸಚಿವರು, ನಿಗಮದ ಎಂ.ಡಿ. ಮತ್ತು ಅಧಿಕಾರಿಗಳು ನಕಲಿ ಖಾತೆ ತೆರೆದು ವರ್ಗಾವಣೆ ಮಾಡಿಕೊಂಡಿದ್ದಾರೆ. ಭ್ರಷ್ಟಾಚಾರಕ್ಕೆ ಇದಕ್ಕಿಂತ ದೊಡ್ಡ ಕನ್ನಡಿ ಬೇರೆ ಬೇಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೆ ಈಶ್ವರಪ್ಪನವರ ಮೇಲೆ ಇದೇ ರೀತಿಯ ಆರೋಪ ಬಂದಿತ್ತು. ಅಲ್ಲಿ ಮೃತನ ಕೈಬರಹ ಇರಲಿಲ್ಲ. ಇಲ್ಲಿ ನೇಣಿಗೆ ಶರಣಾದ ಚಂದ್ರಶೇಖರ್‌ ತನ್ನ ಹಸ್ತಾಕ್ಷರದಲ್ಲಿ ಇಲಾಖೆಯ ಸಚಿವರನ್ನು ಉಲ್ಲೇಖಿಸಿದ್ದಾರೆ. ಸಿದ್ದರಾಮಯ್ಯನವರು ಇಷ್ಟರೊಳಗೆ ನಾಗೇಂದ್ರರನ್ನು ಸಂಪುಟದಿಂದ ವಜಾ ಮಾಡಬೇಕಿತ್ತು. ಅವತ್ತು ಕೇವಲ 9 ಕೋಟಿ ರೂ. ಆರೋಪಕ್ಕೆ ಸಂಬಂಧಿಸಿ ಈಶ್ವರಪ್ಪನವರ ರಾಜೀನಾಮೆಗೆ ಗಂಟಲು ಕಿರುಚಿಕೊಂಡ ಸಿದ್ದರಾಮಯ್ಯನವರು ಈಗೇನು ಹೇಳುತ್ತಾರೆ ? ಎಂದು ಪ್ರಶ್ನಿಸಿದರು.

ಸರ್ಕಾರದ ಕಮಿಷನ್‌ ದಾಹಕ್ಕೆ
ಅಧಿಕಾರಿ ಆತ್ಮಹತ್ಯೆ: ಆರ್‌.ಅಶೋಕ್‌


Spread the love

About Laxminews 24x7

Check Also

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.

Spread the love ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ. ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ