Breaking News

ಹೊಸ ಕಾನೂನು; ಪೊಲೀಸರಿಗೆ ತರಬೇತಿ

Spread the love

ಬೆಳಗಾವಿ: ಇಲ್ಲಿನ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹೊಸ ಕ್ರಿಮಿನಲ್‌ ಕಾನೂನುಗಳ ಬಗ್ಗೆ ತರಬೇತಿ ನೀಡಲಾಯಿತು.ಬೆಳಗಾವಿ | ಹೊಸ ಕಾನೂನು; ಪೊಲೀಸರಿಗೆ ತರಬೇತಿ

ನಗರ ಪೊಲೀಸ್‌ ಉಪ ಆಯುಕ್ತರ ನೇತೃತ್ವದಲ್ಲಿ ನಡೆದ ತರಬೇತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ಭಾರತೀಯ ನ್ಯಾಸ ಸಂಹಿತೆ, ಭಾರತೀಯ ಸಾಕ್ಷಿ ಅಧಿನಿಯಮ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾರ್ಗದರ್ಶನ ನೀಡಿದರು.

 

ಜುಲೈ 1ರಿಂದ ಹೊಸ ಕಾನೂನುಗಳು ಜಾರಿಗೆ ಬರಲಿವೆ. ಈ ಬಗ್ಗೆ ಪೊಲೀಸರಿಗೆ ಅರಿವು ಮೂಡಿಸುವುದಕ್ಕಾಗಿ ತರಬೇತಿ ನೀಡಲಾಗುತ್ತಿದೆ. ಈವರೆಗೆ 800 ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಈಗಾಗಲೇ ಎರಡು ಹಂತದ ತರಬೇತಿ ಮುಗಿದಿದೆ. ಜೂನ್‌ 10ರವರೆಗೆ ತರಬೇತಿ ನಡೆಯಲಿವೆ’ ಎಂದು ನಗರ ಪೊಲೀಸ್‌ ಉಪ ಆಯುಕ್ತೆ ಪಿ.ವಿ.ಸ್ನೇಹಾ ತಿಳಿಸಿದ್ದಾರೆ.


Spread the love

About Laxminews 24x7

Check Also

ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ನಿರಂತರ: ಮಾತಾ ಗಂಗಾದೇವಿ

Spread the love ದಾವಣಗೆರೆ: ನಮ್ಮ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ನಿರಂತರವಾಗಿ ಇದ್ದೇ ಇರುತ್ತದೆ ಎಂದು ಬಸವ ಧರ್ಮ ಪೀಠದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ