Breaking News

ಡ್ರಗ್ಸ್ ಪ್ರಕರಣದಲ್ಲಿ ಹೆಡ್‍ಕಾನ್‍ಸ್ಟೆಬಲ್ ಬಂಧನ..!

Spread the love

ಬೆಂಗಳೂರು,ನ.- ಕೆಂಪೇಗೌಡನಗರ ಪೊಲೀಸ್ ಠಾಣೆಯ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಸಹಾಯ ಮಾಡಿದ ಆರೋಪದಡಿ ಸದಾಶಿವನಗರ ಠಾಣೆಯ ಹೆಡ್‍ಕಾನ್‍ಸ್ಟೆಬಲ್ ಪ್ರಭಾಕರ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಸುನೀಶ್ ಮತ್ತು ಹೇಮಂತ್ ಸೇರಿದಂತೆ 8 ಮಂದಿಯನ್ನು ಬಂಧಿಸಲಾಗಿದೆ.

ತನಿಖೆ ಸಂದರ್ಭದಲ್ಲಿ ಆರೋಪಿಗಳಿಗೆ ಮೊಬೈಲ್ ನಂಬರ್‍ಗಳ ಲೊಕೇಶನ್ ಮತ್ತು ಸಿಮ್ ವಿಳಾಸಗಳನ್ನು ವಾಟ್ಸಪ್ ಮೂಲಕ ಹಣಕ್ಕಾಗಿ ವಿನಿಮಯ ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಹೆಡ್‍ಕಾನ್‍ಸ್ಟೆಬಲ್ ಪ್ರಭಾಕರ್ ಅವರನ್ನು ಅಮಾನತು ಮಾಡಲಾಗಿತ್ತು.

ಪ್ರಭಾಕರ್ ಅವರ ಮೇಲಿನ ಆರೋಪ ಗಂಭೀರವೆಂದು ಪರಿಗಣಿಸಿ, ಪೊಲೀಸ್ ಇಲಾಖೆಯ ಗೌಪ್ಯತೆಗೆ ಸಂಬಂಧಿಸಿದ ವಿಷಯವನ್ನು ರುಪಯೋಗಪಡಿಸಿಕೊಂಡ ಹಿನ್ನೆಲೆಯಲ್ಲಿ ಪ್ರಭಾಕರ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ನಗರ ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ