ಚನ್ನಮ್ಮನ ಕಿತ್ತೂರು: ಕೊಳವೆಬಾವಿಗೆ ಸಂಪರ್ಕ ಕಲ್ಪಿಸಿರುವ ತುಂಡಾಗಿದ್ದ ವಿದ್ಯುತ್ ಪ್ರವಹಿಸುತ್ತಿರುವ ಕೇಬಲ್ ವೈರ್ ಆಕಸ್ಮಿಕವಾಗಿ ತುಳಿದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಸೋಮವಾರ ಮೃತಪಟ್ಟಿದ್ದಾರೆ.
ತಾಲ್ಲೂಕಿನ ಹಿರೇನಂದಿಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯ ಮಂಜುನಾಥ ನೀಲಪ್ಪ ದಾಸನಕೊಪ್ಪ (42) ಮೃತ ವ್ಯಕ್ತಿ.
ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7