Breaking News

ರಾಮದುರ್ಗ | ಪೇಜಾವರ ವಿಶ್ವಪ್ರಸನ್ನ ತೀರ್ಥರ ಪುರಪ್ರವೇಶ: ಅದ್ದೂರಿ ಸ್ವಾಗತ

Spread the love

ರಾಮದುರ್ಗ: ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಸೋಮವಾರ ರಾಮದುರ್ಗ ಪಟ್ಟಣಕ್ಕೆ ಆಗಮಿಸಿದಾಗ ಬ್ರಾಹ್ಮಣ ಸಮಾಜದ ಪ್ರಮುಖರು ಅದ್ದೂರಿ ಸ್ವಾಗತ ಕೋರಿದರು.

ಸಾರೋಟನಲ್ಲಿ ಆಸೀನರಾಗಿದ್ದ ಪೇಜಾವರ ಶ್ರೀಗಳನ್ನು ಮತ್ತು ವಿಶ್ವೇಶ ತೀರ್ಥರ ಭಾವಚಿತ್ರವನ್ನು ತೆರದ ಜೀಪಿನಲ್ಲಿ ಇಟ್ಟು ಭವ್ಯ ಮೆರವಣಿಗೆಯಲ್ಲಿ ಕರೆ ತರಲಾಯಿತು.ರಾಮದುರ್ಗ | ಪೇಜಾವರ ವಿಶ್ವಪ್ರಸನ್ನ ತೀರ್ಥರ ಪುರಪ್ರವೇಶ: ಅದ್ದೂರಿ ಸ್ವಾಗತ

ಮೆರವಣಿಗೆಯು ಇಲ್ಲಿನ ವೆಂಕಟೇಶ್ವರ ದೇವಸ್ಥಾನದಿಂದ ತೇರ ಬಜಾರ, ರಾಘವೇಂದ್ರ ರಥ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ಸುಮಂಗಲೆಯರು ಪೂರ್ಣಕುಂಭ ಮೇಳೆ, ಡೊಳ್ಳು, ಜಾಂಜ್‌ ಪದಕಗಳ ಸದ್ದು ಮೊಳಗಿದವು. ಮಹಿಳೆಯರು ಆರತಿ ಹಿಡಿದು ಸಾಗಿದರು. ಭಕ್ತರು ಮತ್ತು ಮಕ್ಕಳು ಸಾಂಪ್ರದಾಯಿಕ ಉಡುಪು ತೊಟ್ಟು ಮೆರವಣಿಗೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಮತ್ತು 48 ದಿನಗಳ ಕಾಲ ಮಂಡಲ ಪೂಜೆ ನೆರವೇರಿಸಿದ ಪೇಜಾವರ ಶ್ರೀಗಳನ್ನು ಬ್ರಾಹ್ಮಣ ಸಮಾಜ ಮತ್ತು ಹಿಂದೂ ಸಂಘಟನೆಗಳ ಪದಾಧಿಕಾರಿಗಳು ಇಲ್ಲಿನ ರಾಘವೇಂದ್ರ ಮಠದಲ್ಲಿ ಅಭಿನಂದಿಸಲಾಯಿತು. ಮೇ 28 ರಂದು ರಾಘವೇಂದ್ರ ಮಠದಲ್ಲಿ ಶ್ರೀಗಳ ಪಾದಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.


Spread the love

About Laxminews 24x7

Check Also

ಗೌರಿ ಹುಣ್ಣಿಮೆಯಿಂದ ಛಟ್ಟಿ ಅಮವಾಸ್ಯೆವರೆಗೆ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಹುಬ್ಬಳ್ಳಿಯಿಂದ ವಿಶೇಷ ಬಸ್​ ವ್ಯವಸ್ಥೆ

Spread the love ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ತೆರಳುವ ಭಕ್ತಾದಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ