Breaking News

ಪೂರ್ವ ಮುಂಗಾರು ಮಳೆಯಿಂದ ಮಣ್ಣಿನಲ್ಲಿ ತೇವಾಂಶ ಹೆಚ್ಚಳ: ಖಾರಿಫ್ ಪೂರ್ವ ಬಿತ್ತನೆ ವಿಳಂಬ

Spread the love

ಬೆಂಗಳೂರು: ಮುಂಗಾರು ಪ್ರವೇಶಕ್ಕೆ ಮುನ್ನ ಕರ್ನಾಟಕದಲ್ಲಿ ಈ ವರ್ಷ ಸಾಕಷ್ಟು ವಿಳಂಬದ ನಂತರ ಖಾರಿಫ್ ಪೂರ್ವ ಬಿತ್ತನೆ ಆರಂಭವಾಗಿದೆ. ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆ ಸುರಿದು ಸಂಕಷ್ಟದಲ್ಲಿರುವ ರೈತರಿಗೆ ಸಮಾಧಾನ ತಂದಿದೆ. ಆದರೆ ಹಲವೆಡೆ ಮಣ್ಣಿನಲ್ಲಿ ತೇವಾಂಶ ಹೆಚ್ಚಾಗಿದ್ದು, ರೈತರ ಬೀಜ ಬಿತ್ತನೆ ಕಾರ್ಯ ನಿರೀಕ್ಷಿತ ಮಟ್ಟ ತಲುಪಿಲ್ಲ.

ಪೂರ್ವ ಮುಂಗಾರು ಮಳೆಯಿಂದ ಮಣ್ಣಿನಲ್ಲಿ ತೇವಾಂಶ ಹೆಚ್ಚಳ: ಖಾರಿಫ್ ಪೂರ್ವ ಬಿತ್ತನೆ ವಿಳಂಬ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ(KSNDMC) ಅಂಕಿಅಂಶಗಳ ಪ್ರಕಾರ, ಮೇ 1 ರಿಂದ ಇಲ್ಲಿಯವರೆಗೆ, ರಾಜ್ಯದಲ್ಲಿ ಸರಾಸರಿ ಪ್ರತಿವರ್ಷ 60 ಮಿಲಿ ಮೀಟರ್ ಮಳೆಯಾಗುತ್ತಿತ್ತು. ಈ ವರ್ಷ ಇದುವರೆಗೆ ಸರಾಸರಿ 127 ಮಿಮೀ ಮಳೆಯಾಗಿದೆ. ದಕ್ಷಿಣ ಒಳನಾಡು ಕರ್ನಾಟಕದಲ್ಲಿ 74 ಮಿಲಿ ಮೀಟರ್ ಗೆ ವಿರುದ್ಧವಾಗಿ 162ಮಿಮೀ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಸರಾಸರಿ 40ಮಿಮೀ ವಿರುದ್ಧವಾಗಿ 76ಮಿಮೀ ಮಳೆಯಾಗಿದೆ. ಮಲೆನಾಡಿನಲ್ಲಿ 81ಮಿಮೀ ವಿರುದ್ಧವಾಗಿ 203ಮಿಮೀ ಮಳೆಯಾಗಿದೆ. ಕರಾವಳಿ ಕರ್ನಾಟಕದಲ್ಲಿ ಸರಾಸರಿ 86ಮಿಮೀ ವಿರುದ್ಧವಾಗಿ 159ಮಿಮೀ ಮಳೆ ದಾಖಲಾಗಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ