Breaking News

ಶೀಘ್ರವೇ ‘ಅರಣ್ಯ ಇಲಾಖೆ’ಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ

Spread the love

ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತದೆ. ಈ ಹುದ್ದೆಗಳ ಭರ್ತಿಗೆ ಸರ್ಕಾರ ಕರಡು ಪ್ರಸ್ತಾವನೆ ಸಿದ್ಧಗೊಂಡಿದೆ ಎಂಬುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.

Job Alert: 'ಉದ್ಯೋಗಾಕಾಂಕ್ಷಿ'ಗಳಿಗೆ ಗುಡ್ ನ್ಯೂಸ್: ಶೀಘ್ರವೇ 'ಅರಣ್ಯ ಇಲಾಖೆ'ಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ

ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡು ವರ್ಷ ತುಂಬಿದ ಸಂದರ್ಭದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಅವರು, ಅರಣ್ಯಇಲಾಖೆಯಲ್ಲಿ ಸುಮಾರು 6 ಸಾವಿರ ಹುದ್ದೆಗಳು ಖಾಲಿ ಇದ್ದು, ಇವುಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಅರಣ್ಯ ವೀಕ್ಷಕರ 310 ಹುದ್ದೆಗಳ ನೇಮಕಾತಿಗೆ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ಪೂರ್ಣವಾಗಿದ್ದು, ನೀತಿ ಸಂಹಿತೆ ತೆರವಾದ ಬಳಿಕ ನೇಮಕಾತಿ ಪತ್ರಗಳನ್ನು ವಿತರಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.

ಇದರ ಜೊತೆಗೆ 540 ಅರಣ್ಯ ರಕ್ಷಕರ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಜೊತೆಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆಯ ಪೂರ್ವಾನುಮತಿಯ ಅವಶ್ಯಕತೆ ಇಲ. ಹೀಗಾಗಿ ಈ ಭಾಗದಲ್ಲಿ ಖಾಲಿ ಇರುವ 10 ವಲಯ ಅರಣ್ಯಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಶೀಘ್ರ ಲಿಖಿತ ಪರೀಕ್ಷೆ ನಡೆಸಲು ಸೂಚಿಸಲಾಗಿದೆ ಎಂದರು.


Spread the love

About Laxminews 24x7

Check Also

DCM ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಸಿದ CBI

Spread the love ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ