Breaking News

ಕರ್ನಾಟಕ ಈಗ ಕೂಲ್.. ಕೂಲ್; ಈ ಎಲ್ಲಾ ಜಿಲ್ಲೆಗಳಲ್ಲಿ ಭರ್ಜರಿ ಮಳೆ.!

Spread the love

ಪ್ರಿಲ್ 2024ರಲ್ಲಿ ಒಂದೊಂದು ಹನಿ ನೀರಿಗೂ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಈ ಬೆನ್ನಲ್ಲೇ ಇದೀಗ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ & ಬೆಂಗಳೂರು ನಗರವು ಸೇರಿ ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ಜಿಲ್ಲೆಗೆ ಮಳೆಯ ಸಿಂಚನ ಆಗಲಿದೆ.ಆದರೂ ವಿಜಯನಗರ, ತುಮಕೂರು, ಮೈಸೂರು, ಮಂಡ್ಯ, ಕೋಲಾರ & ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲೂ ಮಳೆ ಸುರಿಯುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಕರ್ನಾಟಕ ಈಗ ಕೂಲ್.. ಕೂಲ್; ಈ ಎಲ್ಲಾ ಜಿಲ್ಲೆಗಳಲ್ಲಿ ಭರ್ಜರಿ ಮಳೆ.!

ಸದ್ಯ ಸಿಲಿಕಾನ್​ ಸಿಟಿ ಬೆಂಗಳೂರು ಸೇರಿದಂತೆ, ಕರ್ನಾಟಕದ ಪ್ರತಿಯೊಂದು ಜಿಲ್ಲೆಗಳಿಗೂ ಮಳೆರಾಯ ತಂಪೆರೆದಿದ್ದಾನೆ. ಹವಾಮಾನ ವೈಪರಿತ್ಯದ ಪರಿಣಾಮ ಕರ್ನಾಟಕದ ವಾತಾವರಣ ಕೂಲ್ ಕೂಲ್ ಆಗ್ತಿದೆ. ಹೀಗಾಗಿ, ಬಿಸಿಲಿನಿಂದ ಬೇಸತ್ತಿದ್ದ ಜನರ ಮೊಗದಲ್ಲಿ ಮಳೆರಾಯ ಮಂದಹಾಸ ಮೂಡಿಸಿದ್ದಾನೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಪೂರ್ವ ಮುಂಗಾರು ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜೂನ್ 7 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ: ಮುಂದಿನ 5 ದಿನಗಳಲ್ಲಿ ದಕ್ಷಿಣ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಮಾಲ್ಡೀವ್ಸ್‌ ಮತ್ತು ಕೊಮೊರಿನ್ ಪ್ರದೇಶದಲ್ಲಿ ನೈರುತ್ಯ ಮಾನ್ಸೂನ್ ಮತ್ತಷ್ಟು ಮುನ್ನಡೆಯಲಿದೆ. ಕೇರಳಕ್ಕೆ ನಾಳೆ ಅಥವಾ ನಾಡಿದ್ದು ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.


Spread the love

About Laxminews 24x7

Check Also

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.

Spread the love ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ. ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ