Breaking News

ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಪುನರಾರಂಭ

Spread the love

ಬೆಂಗಳೂರು : ರಾಜ್ಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮೇ 29ರ ಇಂದಿನಿಂದ ಪುನರಾರಂಭವಾಗುತ್ತಿದ್ದು, 31 ರಂದು ರಾಜ್ಯದ ಎಲ್ಲ ಶಾಲೆಗಳಲ್ಲೂ ಏಕಕಾಲಕ್ಕೆ ಪ್ರಾರಂಭೋತ್ಸವ ಹಮ್ಮಿಕೊಳ್ಳಲಾಗಿದೆ.

2024-25ನೇ ಸಾಲಿನ ಶಿಕ್ಷಣವನ್ನು ʼಶೈಕ್ಷಣಿಕ ಬಲವರ್ಧನೆʼ ಪರಿಕಲ್ಪನೆಯ ಆಧಾರದಲ್ಲಿ ನಿರ್ವಹಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಘೋಷವಾಕ್ಯ ಸಿದ್ಧಪಡಿಸಿದ್ದು, ಕಲಿಕಾ ಗುಣಮಟ್ಟ ಹಾಗೂ ತಂತ್ರಜ್ಞಾನ ಆಧಾರಿತ ಬೋಧನೆಗೆ ಹೆಚ್ಚಿನ ಒತ್ತು ನೀಡಲು ಸೂಚಿಸಿದೆ.

ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಪುನರಾರಂಭ : ಮೊದಲ ದಿನವೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, 2 ಜೊತೆ ಸಮವಸ್ತ್ರ ವಿತರಣೆ!

ಶಾಲಾ ಮಕ್ಕಳಿಗೆ ಮೊದಲ ದಿನವೇ ಪಠ್ಯಪುಸ್ತಕ, 2 ಜೊತೆ ಸಮವಸ್ತ್ರ

ಶಾಲಾ ಮಕ್ಕಳಿಗೆ ಮೊದಲ ದಿನದಿಂದಲೇ ಪಠ್ಯಪುಸ್ತಕ, ಎರಡು ಜೊತೆ ಸಮವಸ್ತ್ರ ವಿತರಿಸಲಾಗುತ್ತದೆ. ಇದೇ ಮೊದಲ ಬಾರಿ ಶಾಲಾ ಆರಂಭಕ್ಕೂ ಮೊದಲೇ ಎಲ್ಲ ವಿಷಯಗಳ ಪಠ್ಯಪುಸ್ತಕಗಳು ಶಾಲೆಗಳನ್ನು ತಲುಪಿವೆ. ಒಂದೇ ಬಾರಿಗೆ ಎರಡೂ ಜೊತೆ ಸಮವಸ್ತ್ರ ನೀಡಲಾಗುತ್ತಿದೆ.

1ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯ ಈ ಬಾರಿ ಇಲ್ಲ

ಒಂದನೇ ತರಗತಿಗೆ ಸೇರುವ ಮಕ್ಕಳಿಗೆ ಜೂನ್‌ 1ಕ್ಕೆ 6 ವರ್ಷ ಪೂರ್ಣಗೊಂಡಿರಬೇಕು ಎಂಬ ನಿಯಮ ರೂಪಿಸಲಾಗಿದೆ. ಆದರೆ, ಈ ನಿಯಮ 2024-25ನೇ ಶೈಕ್ಷಣಿಕ ಸಾಲಿಗೆ ಅನ್ವಯಿಸುವುದಿಲ್ಲ. ಮುಂದಿನ ವರ್ಷದಿಂದ ಶಾಲೆಗೆ ಸೇರಿಸುವ ಮಕ್ಕಳಿಗೆ ಈ ನಿಯಮ ಕಡ್ಡಾಯ.

ಶಾಲೆಗೆ ಮಕ್ಕಳನ್ನು ಸೇರಿಸುವಾಗ ಜನನ ಪ್ರಮಾಣಪತ್ರ, ಆಸ್ಪತ್ರೆ ದಾಖಲೆ, ಅಂಗನವಾಡಿ, ಆರೋಗ್ಯ ಸಹಾಯಕಿಯರ ದೃಢೀಕರಣ, ಇಲ್ಲವೇ ಪೋಷಕರು ನೀಡುವ ಸ್ವಯಂ ದೃಢೀಕರಿಸಿದ ಪ್ರಮಾಣ ಪತ್ರ ಸೇರಿದಂತೆ ಯಾವುದಾದರೂ ಒಂದು ದಾಖಲೆ ಸಲ್ಲಿಸಬೇಕು.


Spread the love

About Laxminews 24x7

Check Also

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.

Spread the love ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ. ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ