Breaking News

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮೊದಲಬಾರಿಗೆ ಭ್ರಷ್ಟಾಚಾರದ ಗಂಭೀರ ಆರೋಪ‌?

Spread the love

ಬೆಂಗಳೂರು : ಕಳೆದ ಒಂದು ವರ್ಷದ ಅವಧಿಯಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮೊದಲಬಾರಿಗೆ ಭ್ರಷ್ಟಾಚಾರದ ಗಂಭೀರ ಆರೋಪ‌ ಕೇಳಿಬಂದಿದೆ. ವಾಲ್ಮೀಕಿ ನಿಗಮದಲ್ಲಿ ಕೋಟ್ಯಾಂತರ ರೂ. ಅವ್ಯವಹಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.

ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ಗೆ ವಹಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಸಚಿವ ನಾಗೇಂದ್ರ ತಿಳಿಸಿದರು.

 

 

 

 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣ ಯಾವ ರೀತಿ ಗುರುಪಯೋಗ ಆಗಿದೆ. ಈ ಬಗ್ಗೆ ನಾವು ಪರಿಶೀಲನೆ ಮಾಡುತ್ತಿದ್ದೇವೆ. ನಿಗಮದ ಎಮ್ ಡಿ ಕೂಡ ದೂರು ಮಾಡಿದ್ದಾರೆ.ನಮ್ಮ ಇಲಾಖೆ ಅಧಿಕಾರಿಗಳ ಮೇಲೆ ದೂರು ದಾಖಲಾಗಿದೆ.ಎಮ್ ಡಿ ಅವರ ಸಹಿಗೆ ಕಳುಹಿಸಿದ್ದೇವೆ ಎಂದು ತಿಳಿಸಿದರು.

ಸುಮಾರು 87 ಕೋಟಿ ಬ್ಯಾಂಕ್ ನಿಂದ ಹಣ ವರ್ಗಾವಣೆ ಆಗಿದೆ ಎಂದು ತಿಳಿದು ಬಂದಿದ್ದು ಇಲ್ಲಿವರೆಗೆ 28 ಕೋಟಿ ಅಧಿಕಾರಿ ಆಗಿದ್ದು ಉಳಿದ ಹಣವನ್ನು ಇಂದು ಸಂಜೆ ಒಳಗೆ ರಿಕವರಿ ಮಾಡಲಾಗುತ್ತದೆ ಎಂದು ಎಂಡಿ ಅವರು ತಿಳಿಸಿದ್ದಾರೆ ಎಂದು ಸಚಿವ ನಾಗೇಂದ್ರ ತಿಳಿಸಿದರು.

ಸಂಜೆಯ ಒಳಗೆ ಸಂಬಂಧಪಟ್ಟ ಖಾತೆಗೆ ಹಣ ರಿಕವರಿ ಯಾಗುತ್ತದೆ ಈ ಬಗ್ಗೆ ಬ್ಯಾಂಕ್ ಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ್ದೇವೆ ಎಲ್ಲಾ ಹಣ ನಿಗಮದ ಖಾತೆಗೆ ವಾಪಸ್ ಬರಬೇಕು ಗಡವ ಮೀರಿದರೆ ಬ್ಯಾಂಕ್ ಅಧಿಕಾರಿಗಳ ಮೇಲು ಅಪಾಯ ದಾಖಲಾಗುತ್ತದೆ ಇಷ್ಟು ದೊಡ್ಡ ಜವಾಬ್ದಾರಿ ಸಣ್ಣಾಧಿಕಾರಿಗೆ ಹೇಗೆ ನೀಡಲಾಯಿತು ಎಂದು ಪರಿಶೀಲ ನಡೆಸಲಾಗುತ್ತದೆ ಎಂದರು.

 

 

 


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ