Breaking News

ಬಾಲಕನಿಂದ ವ್ಹೀಲಿಂಗ್; ವಾಹನ ಜಪ್ತಿ

Spread the love

ಬೆಂಗಳೂರು: ಕೆ.ಜಿ.ಹಳ್ಳಿ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ವ್ಹೀಲಿಂಗ್‌ ಮಾಡುವವರನ್ನು ಪತ್ತೆ ಹಚ್ಚಲು ಕೈಗೊಂಡ ವಿಶೇಷ ಕಾರ್ಯಾಚರಣೆಯಲ್ಲಿ ಓರ್ವ ಬಾಲಕನನ್ನು ಪತ್ತೆಮಾಡಿದ್ದು, ವಾಹನವನ್ನು ಜಪ್ತಿಮಾಡಲಾಗಿದೆ.

ಬುಧವಾರ ಠಾಣಾ ಸಿಬ್ಬಂದಿ ಗಸ್ತಿನಲ್ಲಿರುವಾಗ ಹೆಚ್.ಬಿ.ಆರ್.ಬಾಲಕನಿಂದ ವ್ಹೀಲಿಂಗ್; ವಾಹನ ಜಪ್ತಿ

ಲೇಔಟ್ ಮುಖ್ಯರಸ್ತೆಯಲ್ಲಿ ವ್ಹೀಲಿಂಗ್‌ ಮಾಡುತ್ತಿದ್ದ ಬಾಲಕನ ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಂಡು ವಿಚಾರಣೆ ನಡೆಸಿದ್ದಾರೆ.

‘ವಿಚಾರಣೆಯಲ್ಲಿ ಸವಾರ ಅಪ್ರಾಪ್ತ ವಯಸ್ಕನೆಂದು ತಿಳಿದು ಬಂದಿದ್ದು, ಸಂಚಾರ ಪೊಲೀಸರು ಸವಾರನ ಪೋಷಕರು/ ವಾಹನ ಮಾಲೀಕರ ವಿರುಧ್ಧ ಪ್ರಥಮ ವರ್ತಮಾನ ವರದಿ (ಎಫ್.ಐ.ಆರ್) ದಾಖಲಿಸಿಕೊಂಡಿದ್ದಾರೆ. ವಾಹನದಲ್ಲಿ ಡ್ಯಾಗರ್ ಸಿಕ್ಕಿದ್ದು, ಮುಂದಿನ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಡಿ.ಜೆ.ಹಳ್ಳಿ ಕಾನೂನು ಮತ್ತು ಸುವ್ಯವಸ್ಥೆ ಪೊಲೀಸ್‌ ಠಾಣೆಯ ವಶಕ್ಕೆ ನೀಡಲಾಗಿದೆ’ ಎಂದು ಪ್ರಕಟಣೆಯಲ್ಲಿ ಉಪ ಪೊಲೀಸ್‌ ಆಯುಕ್ತ ಕೆ.ವಂಶಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ