Breaking News

ಬೆಳಗಾವಿಯಲ್ಲಿ ಅಧಿವೇಶನ ನಡೆಸಬೇಕು ಇಲ್ಲದಿದ್ದಲ್ಲಿ ಉಗ್ರ ಹೋರಾಟ:ಕ. ರ, ವೇ.ದೂಪದಾಳ

Spread the love

ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಸಬೇಕು ಎಂದು ಆಗ್ರಹಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ದೂಪದಾಳ ಕಾರ್ಯಕರ್ತರು ಘಟಪ್ರಭಾ ಮೃತ್ಯುಂಜಯ ವೃತ್ತದಲ್ಲಿ ರಾಜ್ಯ ಹೆದ್ದಾರಿ ತಡೆಯುವ ಮೂಲಕ ಪ್ರತಿಭಟನೆ ನಡೆಸಿದರು ಘಟಪ್ರಭಾ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಘೋಷಣೆ ಕೂಗಿ ಸುಮಾರು ಹತ್ತು ನಿಮಿಷಗಳ ಕಾಲ ರಾಜ್ಯ ಹೆದ್ದಾರಿ ತಡೆದರು ಹಾಗೂ ಘಟಪ್ರಭಾ ಪಿಎಸ್ಆಯ್ ,ಗ್ರಾಮ ಲೆಕ್ಕಾಧಿಕಾರಿ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ದೂಪದಾಳ ಇವರ ಮುಖಾಂತರ ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪ ನವರಿಗೆ ಮನವಿ ಸಲ್ಲಿಸಲಾಯಿತು

ಬೆಳಗಾವಿಯಲ್ಲಿ ಅಧಿವೇಶನ ನಡೆಸಬೇಕು ಇಲ್ಲದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುದು ಎಂದು ಎಚ್ಚರಿಸಲಾಯಿತು ಈ ಸಂಧರ್ಭದಲ್ಲಿ ತಾಲ್ಲೂಕು ಸಂಚಾಲಕ ರೆಹಮಾನ್ ಮೊಕಾಶಿ ಘಟಕ ಅದ್ಯಕ್ಷ ಶೆಟ್ಟೆಪ್ಪಾ ಗಾಡಿವಡ್ಡರ ರವೀಂದ್ರ ನಾವಿ ಮುಬಾರಕ್ ಜಮಖಂಡಿ ಲಕ್ಮಣ ಗಾಡಿವಡ್ಡರ ಶಂಕರ್ ಗಾಡಿವಡ್ಡರ ಸದಾನಂದ ಗಾಡಿವಡ್ಡರ ರಮೇಶ್‌ ಗಾಡಿವಡ್ಡರ ಗಜಪ್ಪ ಗಾಡಿವಡ್ಡರ ಕೆಂಪಣ್ಣಾ ಗಾಡಿವಡ್ಡರ ರಾಜು ದೊಡಮನಿ ದಿಲೀಪ್ ಹಂಜಿ ಬಶೀರ ಜಮಾದಾರ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು


Spread the love

About Laxminews 24x7

Check Also

ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಮನವಿ

Spread the loveಬೆಳಗಾವಿ : ನಗರದ ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಜಿಲ್ಲಾ ನೇಕಾರರ ಬಳಗದ ಸದಸ್ಯರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ