Breaking News

ರಸಗೊಬ್ಬರ ಪೂರೈಸಲು ರೈತರ ಒತ್ತಾಯ

Spread the love

ರಾಣೆಬೆನ್ನೂರು: ‘ಹದವಾದ ಮಳೆಯಾಗಿದ್ದು, ರೈತರು ಬಿತ್ತನೆ ಮಾಡುವುದಕ್ಕೆ ಸಕಾಲವಾಗಿದೆ. ಆದರೆ ರಸಗೊಬ್ಬರ ಸಿಗುತ್ತಿಲ್ಲ. ಕೂಡಲೇ ಹೊಸ ಗೊಬ್ಬರ ಪೂರೈಕೆ ಮಾಡಬೇಕು’ ಎಂದು ರೈತ ಜಗದೀಶ್ ಕೆರೋಡಿ ಒತ್ತಾಯಿಸಿದರು.

ಸಮೀಪದ ಹುಲ್ಲತ್ತಿ ಗ್ರಾಮದ ರೈತ ಸಂಪರ್ಕ ಕೇಂದ್ರದ ಮುಂದೆ ಶನಿವಾರ ರಸಗೊಬ್ಬರ ಪೂರೈಸುವಂತೆ ಪ್ರತಿಭಟನೆ ನಡೆಸಿ, ರೈತರಿಗೆ ಡಿಎಪಿ ಮತ್ತು ಯುರಿಯಾ ಪೂರೈಕೆ ಆಗದೆ ರೈತರು ಗೊಬ್ಬರಕ್ಕಾಗಿ ಪರದಾಡುವಂತಾಗಿದೆ ಎಂದು ಅವರು ದೂರಿದರು.

ರಸಗೊಬ್ಬರ ಪೂರೈಸಲು ರೈತರ ಒತ್ತಾಯ

ಹಾವೇರಿ ಜಿಲ್ಲೆಯಾದ್ಯಂತ ಸುರಿದ ಮಳೆಯಿಂದಾಗಿ ರೈತರ ಕೃಷಿ ಚಟುವಟಿಕೆಗಳು ಗರಿಗೆದರಿದ್ದು, ಹಳ್ಳಿಗಳಿಂದ ರೈತರು ರಸ ಗೊಬ್ಬರಕ್ಕಾಗಿ ಸೊಸೈಟಿಗಳ ಮುಂದೆ ನಿಂತು ಗೋಗರೆದರೂ ರೈತರಿಗೆ ಸಮರ್ಪಕವಾಗಿ ರಸಗೊಬ್ಬರ ಸಿಗುತ್ತಿಲ್ಲ ಬೇಸರ ವ್ಯಕ್ತಪಡಿಸಿದರು.

ಕೆಲವು ದಿನಗಳ ಹಿಂದೆ ಜಿಲ್ಲಾಧಿಕಾರಿಗಳು ಹಾವೇರಿ ಜಿಲ್ಲೆಯ ಎಲ್ಲಾ ರೈತ ಬಾಂಧವರಿಗೆ 2024ನೇ ಸಾಲಿನ ಮುಂಗಾರು ಹಂಗಾಮಿಗೆ ಬೀಜ, ರಸಗೊಬ್ಬರಗಳ ದಾಸ್ತಾನು ಸಂಗ್ರಹಿಸಲಾಗಿದೆ ಎಂದು ಪತ್ರಿಕೆಗಳಲ್ಲಿ ತಿಳಿಸಿದ್ದರು. ಆದರೆ ಇಲ್ಲಿ ರೈತರು ಬಂದು ಗೊಬ್ಬರಕ್ಕಾಗಿ ಸೊಸೈಟಿ ಮುಂದೆ ಭಿಕ್ಷೆ ಬೇಡುವಂತಾಗಿದೆ. 2003ರಿಂದ ಹಿಂಗಾರು ಮತ್ತು ಮುಂಗಾರಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ರೈತರು ಕೃಷಿ ಚಟುವಟಿಕೆಗಳಿಗೆ ಮಾಡಿದ ಸಾಲವು ಹಾಗೆ ಉಳಿದಿದೆ. ಈ ವರ್ಷ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕುಗೊಂಡಿದ್ದು, ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ರೈತರು ಕೇವಲ ರಸಗೊಬ್ಬರಕ್ಕಾಗಿ ಅಲೆದಾಡುವಂತಾಗಬಾರದು. ಸರಿಯಾದ ಸಮಯಕ್ಕೆ ರಸಗೊಬ್ಬರ ಪೂರೈಸದಿದ್ದರೆ ರೈತರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.


Spread the love

About Laxminews 24x7

Check Also

DCM ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಸಿದ CBI

Spread the love ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ