Breaking News

ಭ್ರಷ್ಟಾಚಾರ ಆರೋಪ‌ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ..?

Spread the love

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ‌ ಕೇಳಿಬಂದ ಹಿನ್ನೆಲೆಯಲ್ಲಿ ಇಂದು ಸಂಜೆ ಸಿಎಂ ತಮ್ಮ ಗೃಹ ಕಚೇರಿಗೆ ಸಚಿವ ನಾಗೇಂದ್ರ ಅವರ ಭೇಟಿಗೆ ಕರೆದುರುವುದು ಬೆಳಕಿಗೆ ಬಂದಿದೆ.

ಈ ಕುರಿತು ಸಚಿವ ನಾಗೇಂದ್ರ ಅವರಿಗೆ ಸಿಎಂ ಸಿದ್ದರಾಮಯ್ಯ ಬುಲಾವ್ ನೀಡಿದ್ದು, ಇಂದು ಅಥವಾ ನಾಳೆ ನಾಗೇಂದ್ರ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ. ಇನ್ನೂ ಭ್ರಷ್ಟಾಚಾರ ಕುರಿತು ಈಗಾಗಲೇ ಸರ್ಕಾರ ತನಿಖೆಗೆ ಆದೇಶ ಹೊರಡಿಸಿದೆ.

 

ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ..? ಸಚಿವ ನಾಗೇಂದ್ರ ರಾಜೀನಾಮೆ ಸಾಧ್ಯತೆ

 

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಕುರಿತು ಇಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಸಚಿವ ನಾಗೇಂದ್ರ ತಲೆದಂಡಕ್ಕೆ ಸಿಎಂ ಮನೆಗೆ ಮುತ್ತಿಗೆ ಹಾಕುವ ಯತ್ನವು ನಡೆಯಿತು. ಅಷ್ಟೇ ಅಲ್ಲದೆ ರಾಜ್ಯದ ವಿವಿಧ ಕಡೆಗಳಲ್ಲಿ ಸರ್ಕಾರಕ್ಕೆ ಪ್ರತಿಭಟನೆ ಬಿಸಿ ತಟ್ಟಿದೆ


Spread the love

About Laxminews 24x7

Check Also

ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ವಶಪಡಿಸಿಕೊಂಡ ಖಾನಾಪುರ ಪೊಲೀಸರು

Spread the loveಬೆಳಗಾವಿ: ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ಸಂಗ್ರಹಿಸಿ ಕಾರಿನಲ್ಲಿ ಖಾನಾಪುರದಿಂದ ಬೆಳಗಾವಿಯತ್ತ ಸಾಗಿಸುತ್ತಿದ್ದಾಗ ದಾಳಿ ಮಾಡಿರುವ ಖಾನಾಪುರ ಪೊಲೀಸರು ಓರ್ವನನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ