ಹಾಸನ: ಅಶ್ಲೀಲ ವಿಡಿಯೊಗಳಿದ್ದ ಪೆನ್‌ಡ್ರೈವ್ ಹಂಚಿಕೆ ಪ್ರಕರಣದ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೌಡಗೆ ಗುರುವಾರ ಮೂರನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಪೆನ್‌ಡ್ರೈವ್ ಹಂಚಿಕೆ ಪ್ರಕರಣದ ಆರನೇ ಮತ್ತು ಏಳನೇ ಆರೋಪಿಯಾಗಿರುವ ಯಲಗುಂದ ಚೇತನ್ ಹಾಗೂ ಲಿಖಿತ್‌ಗೌಡ ಅವರನ್ನು ಎಸ್‌ಐಟಿ ಅಧಿಕಾರಿಗಳು ಮೇ 12 ರಂದು ಬಂಧಿಸಿದ್ದರು.
ಬಂಧನದ ಹದಿನೆಂಟು ದಿನಗಳ ಬಳಿಕ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.
ಸದ್ಯ ಹಾಸನದ ಸಂತೇಪೇಟೆಯ ಜಿಲ್ಲಾ ಕಾರಾಗೃಹದಲ್ಲಿರುವ ಚೇತನ್ ಹಾಗೂ ಲಿಖಿತ್‌ಗೌಡ ಗುರುವಾರ ಸಂಜೆ ಅಥವಾ ಶುಕ್ರವಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
Laxmi News 24×7