ಕುಶಾಲನಗರ: ತಾಲೂಕಿನ ಮಾದಾಪಟ್ಟಣ ಗ್ರಾಮದ ನಿವಾಸಿ ಪೊಲೀಸ್ ಕಾನ್‌ಸ್ಟೆಬಲ್ ಸುನಿಲ್ ಕುಮಾರ್ ಎಂಬುವರ ಮನೆ ಹಿಂಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಅಲ್ಮೇರಾ ಒಡೆದು ₹15 ಸಾವಿರ ನಗದು ಹಾಗೂ 40 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದಾರೆ.

ಇದೇ ಮನೆಯ ಹಿಂಭಾಗದಲ್ಲಿರುವ ಮನೆಯಲ್ಲಿಯೂ ಕಳವಿಗೆ ಪ್ರಯತ್ನಿಸಿದ್ದಾರೆ.
ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾ ವಿಧಿವಿಜ್ಞಾನ, ಹಾಗೂ ಶ್ವಾನದಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಆದರೆ ಕಳ್ಳರ ಸುಳಿವು ಮಾತ್ರ ಪತ್ತೆಯಾಗಿಲ್ಲ. ಈ ಕುರಿತು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7