ಭರಮಸಾಗರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಮಹಿಳೆಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.
ಸಮೀಪದ ಓಬಳಾಪುರ ಗ್ರಾಮದ ವಿಜಯಲಕ್ಷ್ಮೀ (55) ಮೃತ ಮಹಿಳೆ. ಬುಧವಾರ ತಮ್ಮದೇ ಹೊಲದಲ್ಲಿ ಪಾರ್ಥೇನಿಯಂ ಗಿಡ ಕೀಳುವ ವೇಳೆ ಬಲಗೈಗೆ ಹಾವು ಕಚ್ಚಿದೆ.

ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆ ಗೆ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಮುಂಜಾನೆ ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿದ್ದಾರೆ.
ಮೃತರು ಪತಿ, ಒರ್ವ ಪುತ್ರ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದೆ
Laxmi News 24×7