Breaking News

ಹಾವು ಕಚ್ಚಿ ರೈತ ಮಹಿಳೆ ಮೃತ್ಯು

Spread the love

ರಮಸಾಗರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಮಹಿಳೆಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.

ಸಮೀಪದ ಓಬಳಾಪುರ ಗ್ರಾಮದ ವಿಜಯಲಕ್ಷ್ಮೀ (55) ಮೃತ ಮಹಿಳೆ. ಬುಧವಾರ ತಮ್ಮದೇ ಹೊಲದಲ್ಲಿ ಪಾರ್ಥೇನಿಯಂ ಗಿಡ ಕೀಳುವ ವೇಳೆ ಬಲಗೈಗೆ ಹಾವು ಕಚ್ಚಿದೆ.

Bharamasagara; ಹಾವು ಕಚ್ಚಿ ರೈತ ಮಹಿಳೆ ಮೃತ್ಯು

ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆ ಗೆ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಮುಂಜಾನೆ ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿದ್ದಾರೆ.

ಮೃತರು ಪತಿ, ಒರ್ವ ಪುತ್ರ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದೆ


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ