Breaking News

ಬಲವಂತದ ಬಂದ್ ಗೆ ಸರ್ಕಾರ ಅವಕಾಶ ಕೊಡಲ್ಲ .B.S.Y.ಎಚ್ಚರಿಕೆ

Spread the love

ಬೆಂಗಳೂರು: ರಾಜ್ಯದಲ್ಲಿ ಎಲ್ಲಿಯೂ ಬಲವಂತದ ಬಂದ್ ಗೆ ಸರ್ಕಾರ ಅವಕಾಶ ಕೊಡಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಕನ್ನಡ ಪರ ಸಂಘಟನೆಗಳಿಗೆ ಎಚ್ಚರಿಕೆ ನೀಡಿದ್ದಾರೆ. ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 5ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.ವಿಶ್ವ ಮೀನುಗಾರಿಕಾ ದಿನಾಚರಣೆಗೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ನಾನು ಕನ್ನಡದ ಪರವಾಗಿ, ಕನ್ನಡಿಗರ ಪರವಾಗಿ ಇರುವಂಥವನು. ಕನ್ನಡಿಗರಿಗೆ ಬೇಕಾದ ಹೆಚ್ಚಿನ ಸೌಲಭ್ಯ ಒದಗಿಸಲು ನಾನು ಸಿದ್ಧನಿದ್ದೇನೆ. ಬಂದ್ ಕರೆ ನೀಡುವುದು ಸೂಕ್ತ ಅಲ್ಲ. ಜನರು ಸಹ ಈ ನಡೆಯಲ್ಲ ಮೆಚ್ಚುವದಿಲ್ಲ. ಬಲವಂತದಿಂದ ಬಂದ್ ಮಾಡಲು ಎಲ್ಲಿಯೂ ನಾನು ಅವಕಾಶ ಕೊಡಲ್ಲ. ಪ್ರತಿಕೃತಿ ದಹನ ಮಾಡೋದು, ಕೆಟ್ಟದಾಗಿ ನಡೆದುಕೊಳ್ಳುತ್ತಿರುವುದನ್ನ ಗಮನಿಸಿದ್ದೇನೆ. ಬಹಳ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ಸಂದೇಶವನ್ನ ರವಾನಿಸಿದರು.

ಶಾಂತಿಯುತವಾಗಿ ಪ್ರತಿಭಟನೆ ಮಾಡಲಿ. ಆದರೆ ಪ್ರತಿಭಟನೆಗೆ ಬೇರೆ ಸ್ವರೂಪ ಕೊಡೋದು ಬೇಡ. ಎಲ್ಲ ವರ್ಗಗಳಿಗೂ ಸರ್ಕಾರ ನ್ಯಾಯ ಒದಗಿಸೋ ಕೆಲಸ ಸರ್ಕಾರ ಮಾಡುತ್ತಿದೆ. ಸರ್ಕಾರ ಯಾರಿಗೂ ಭೇದ ಭಾವ ಮಾಡುತ್ತಿಲ್ಲ. ಸರ್ಕಾರದ ಉದ್ದೇಶ ಅರ್ಥ ಮಾಡಿಕೊಂಡು ಸಹಕಾರ ಕೊಡಲಿ ಎಂದು ಸಿಎಂ ಹೇಳಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ