ಶಿವಮೊಗ್ಗ: ನಮ್ಮ ಶಾಸಕರನ್ನು ಕೊಂಡೊಯ್ದು ಬಾಂಬೆಯಲ್ಲಿ ಇಟ್ಟುಕೊಂಡಿದ್ದ ವಿಜಯೇಂದ್ರ ಅವರಿಗೆ ಹಣ ವರ್ಗಾವಣೆಯಲ್ಲಿ ವಿಶೇಷವಾದ ನೈಪುಣ್ಯತೆ ಇದೆ. ಹೀಗಾಗಿ ವಾಲ್ಮೀಕಿ ನಿಗಮದ ಹಣ ಹೊರರಾಜ್ಯಕ್ಕೆ ವರ್ಗಾವಣೆಯಾಗಿದೆ. ಚುನಾವಣೆಗೆ ಬಳಕೆಯಾಗಿದೆ ಎನ್ನುತ್ತಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಜಯೇಂದ್ರ ನಮ್ಮ ಸರ್ಕಾರ ಮತ್ತು ಪಕ್ಷದ ಬಗ್ಗೆ ಮಾತನಾಡುವ ಬದಲು ತಮ್ಮದೇ ಪಕ್ಷದ ಯತ್ನಾಳ್ ಮತ್ತು ಈಶ್ವರಪ್ಪ ಪ್ರಶ್ನೆಗಳಿಗೆ ಉತ್ತರ ಕೊಡಲಿ. ಚಂದ್ರಶೇಖರನ್ ಪ್ರಕರಣದಲ್ಲಿ ರಾಜಕೀಯ ಮಾಡಬಾರದು. ಆ ಕುಟುಂಬ ಸಂಕಷ್ಟದಲ್ಲಿದೆ. ಮುಖ್ಯಮಂತ್ರಿಗಳು ಈ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅವರ ಕುಟುಂಬದೊಂದಿಗೆ ಸರ್ಕಾರ ಇರುತ್ತದೆ. ಪ್ರಕರಣದ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ. ಮಾನವೀಯ ನೆಲೆಯಲ್ಲಿ ಮೃತ ಚಂದ್ರಶೇಖರನ್ ಮಕ್ಕಳು ಮತ್ತು ಕುಟುಂಬಕ್ಕೆ ನೆರವು ನೀಡಲಾಗುವುದು ಎಂದು ಹೇಳಿದರು.
Laxmi News 24×7