34 ದಿನಗಳ ಕಣ್ಣಾಮುಚ್ಚಾಲೆ ಆಟ ಇವತ್ತಿಗೆ ಅಂತ್ಯವಾಗಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಇಷ್ಟು ದಿನ ವಿದೇಶದಲ್ಲಿ ತಲೆಮರಿಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜರ್ಮನಿಯ ಮ್ಯೂನಿಕ್‌ನಿಂದ ಬೆಂಗಳೂರಿಗೆ ಬಂದು ಇಳಿಯುತ್ತಿದ್ದಂತೆ ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ
ಬೆಂಗಳೂರು, ಮೇ 31: 35 ದಿನಗಳ ಕಣ್ಣಾಮುಚ್ಚಾಲೆ ಆಟ ಇವತ್ತಿಗೆ ಅಂತ್ಯವಾಗಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಇಷ್ಟು ದಿನ ವಿದೇಶದಲ್ಲಿ ತಲೆಮರಿಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು (Prajwal Revanna) ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಜರ್ಮನಿಯ ಮ್ಯೂನಿಕ್‌ನಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಐಎಬಿ ವಿಮಾನ ನಿಲ್ದಾಣಕ್ಕೆ ಆರೋಪಿ ಬಂದಿಳಿಯುತ್ತಿದ್ದಂತೆ ಪೊಲೀಸ್ ಪಡೆ ಅಲರ್ಟ್ ಆಗಿದ್ದು, ನೇರವಾಗಿ ಜೀಪ್ ಹತ್ತಿಸಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದ ಎಸ್ಐಟಿ, ಕೆಐಎಬಿ ಹಿಂದಿನ ಗೇಟ್ ಮೂಲಕ ಕರೆದೊಯ್ದಿದ್ದಾರೆ. ಏರ್ಪೋರ್ಟ್ನಿಂದ ಬೆಂಗಳೂರಿನ ಎಸ್ಐಟಿ ಕಚೇರಿಯತ್ತ ಬಿಗಿ ಭದ್ರತೆಯಲ್ಲಿ ಕರೆದುಕೊಂಡು ಹೋಗಿದ್ದಾರೆ. ಇತ್ತ ಸಿಐಡಿ ಕಚೇರಿ ಬಳಿ ಪೊಲೀಸರು ಅಲರ್ಟ್ ಆಗಿದ್ದು, ಇಬ್ಬರು ಇನ್ಸ್ ಪೆಕ್ಟರ್ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ.
Laxmi News 24×7