ದಾವಣಗೆರೆ: ಚನ್ನಗಿರಿ ಪೊಲೀಸ್ ಠಾಣೆ ಧ್ವಂಸ ಹಾಗೂ ಆದಿಲ್ ಸಾವಿನ ಕುರಿತಾದ ಎರಡು ಪ್ರಕರಣಗಳನ್ನು ಹೆಚ್ಚಿನ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ತಿಳಿಸಿದರು.
ಗುರುವಾರ ಸಂಜೆ ಚನ್ನಗಿರಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿ, ಚನ್ನಗಿರಿಯಲ್ಲಿ ಕಳೆದ ಶುಕ್ರವಾರ ನಡೆದಂತಹ ಘಟನೆಯ ಬಗ್ಗೆ ಮಾಹಿತಿ ಪಡೆಯಲು ಬಂದಿರುವುದಾಗಿ ತಿಳಿಸಿದರು.

ಪೊಲೀಸ್ ಠಾಣೆಗೆ ನುಗ್ಗಿ ಧ್ವಂಸ ಮಾಡಿರುವ ಒಂದು ಪ್ರಕರಣವಾದರೆ, ಮಟ್ಕಾ ಆಡುಸುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ ಪ್ರಕರಣ ಕೂಡ ಒಂದಾಗಿದೆ. ಈ ಎರಡೂ ಪ್ರಕರಣಗಳನ್ನು ಹೆಚ್ಚಿನ ತನಿಖೆಗೆ ವಹಿಸಲಾಗಿದೆ. ತನಿಖೆಯ ವರದಿ ಎಫ್ ಎಸ್‌ಎಲ್ ವರದಿ ಬಂದಾಗ ಸತ್ಯಾಂಶ ಗೊತ್ತಾಗಲಿದೆ. ಆ ನಂತರ ಏನು ಕ್ರಮ ತೆಗೆದುಕೊಳ್ಳಬೇಕು ಎಂಬುದು ಗೊತ್ತಾ ಗಲಿದೆ ಎಂದರು.
Laxmi News 24×7