Breaking News

ಹೆಸರು ಬದಲಿಸಿಕೊಂಡ ಶಶಿಕುಮಾರ್‌ ಪುತ್ರ ಅಕ್ಷಿತ್‌

Spread the love

ನಾಯಕ-ನಾಯಕಿಯರು ತಮ್ಮ ಮೂಲ ಹೆಸರು ಬದಲಿಸಿಕೊಂಡು ಆಗಾಗ ಅದೃಷ್ಟ ಪರೀಕ್ಷೆಗಿಳಿಯುತ್ತಾರೆ. ಈಗ ನಟ ಶಶಿಕುಮಾರ್‌ ಪುತ್ರ ಕೂಡಾ ತಮ್ಮ ಹೆಸರು ಬದಲಿಸಿಕೊಂಡಿದ್ದಾರೆ. ಅಕ್ಷಿತ್‌ ಎಂಬ ಹೆಸರನ್ನು ಆದಿತ್ಯ ಎಂದು ಬದಲಿಸಿಕೊಂಡಿದ್ದಾರೆ. ಈ ಹೆಸರಿನೊಂದಿಗೆ ಈಗ ತೆರೆಮೇಲೆ ಬರಲು ಸಜ್ಜಾಗಿದ್ದಾರೆ.

ಅದು “ಕಾದಾಡಿ’ ಮೂಲಕ. ಇದು ಅದಿತ್ಯ ನಟನೆಯ ಹೊಸ ಸಿನಿಮಾ

.Kaadaadi Movie: ಹೆಸರು ಬದಲಿಸಿಕೊಂಡ ಶಶಿಕುಮಾರ್‌ ಪುತ್ರ ಅಕ್ಷಿತ್‌

ಕನ್ನಡ, ತೆಲುಗು,ಹಿಂದಿ ಮತ್ತು ತಮಿಳು ಭಾಷೆಯಲ್ಲಿ ತಯಾರಾಗಿರುವ ಈ ಸಿನಿಮಾವನ್ನು ಸತೀಶ್‌ ಮಾಲೆಂಪಾಟಿ ನಿರ್ದೇಶಿಸಿ, ಅರುಣಂ ಫಿಲಂಸ್‌ ಮುಖಾಂತರ ನಿರ್ಮಾಣ ಮಾಡಿದ್ದಾರೆ.

ನಾಯಕನ ಪರಿಚಯದ ಎರಡನೇ ಲಿರಿಕಲ್‌ ವಿಡಿಯೋ ಹಾಡನ್ನು ಬಿಡುಗಡೆ ಮಾಡಿದೆ ತಂಡ. ಎನ್‌.ಮಾರುತಿ ಸಾಹಿತ್ಯದ “ಕಲೆಯು ಇರಬೇಕು, ಮನೆಯು ಇರಬೇಕು, ಗುಡಿಯು ಇರಬೇಕು, ಕುಲವೂ ಇರಬೇಕು. ಸಹನೆಯು ಇರಬೇಕು, ಸಾಧನೆಯು ಇರಬೇಕು, ಗೆಲುವು ಇರಬೇಕು, ಸೋತರೂ ಗೆಲ್ಲುವ ಛಲವು ಇರಬೇಕು’ ಹಾಡಿಗೆ ಶಶಾಂಕ್‌ ಶೇಷಗಿರಿ ಧ್ವನಿಯಾಗಿದ್ದಾರೆ.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ