Breaking News

ಪುಸ್ತಕ ಮಳಿಗೆಯೊಂದರಲ್ಲಿ ಕಳ್ಳತನ

Spread the love

ದಾಂಡೇಲಿ: ನಗರದ ಲೆನಿನ್ ರಸ್ತೆಯಲ್ಲಿರುವ ಬುಕ್ ಸ್ಟಾಲ್ ವೊಂದರಲ್ಲಿ ಮೇ.31ರ ಶುಕ್ರವಾರ ನಸುಕಿನ ವೇಳೆ ಕಳ್ಳತನ ನಡೆದಿರುವ ಘಟನೆ ನಡೆದಿದೆ.

ಪುಸ್ತಕ ಮಳಿಗೆಯ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು 2 ಸಾವಿರ ರೂ. ನಗದು ಮತ್ತು ಅಗತ್ಯ ದಾಖಲೆ ಪತ್ರಗಳಿದ್ದ ತಿಜೋರಿ ಹಾಗೂ ಸಿಸಿ ಕ್ಯಾಮರಾದ ಡಿವಿಆರ್ ಅನ್ನು ಹೊತ್ತೊಯ್ದಿದ್ದಾರೆ.

ಘಟನೆಯ ಕುರಿತಂತೆ ಪುಸ್ತಕ ಮಳಿಗೆಯ ಮಾಲಕ ಅಲ್ಲಂಪ್ರಭು ಪಾಟೀಲ್ ಅವರು ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ