Breaking News

ನಾಡಿದ್ದು ಕಾಂಗ್ರೆಸ್‌ ಶಾಸಕಾಂಗ ಪಕ್ಷ ಸಭೆ

Spread the love

ಬೆಂಗಳೂರು: ಜೂನ್‌ 2ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಮೇಲ್ಮನೆ ಚುನಾವಣೆ ಸಹಿತ ಹಲವು ವಿಷಯಗಳು ಸಭೆಯಾಗಲಿವೆ.

ವಿಧಾನಸಭೆ ಸಂಖ್ಯಾಬಲದ ಆಧಾರದಲ್ಲಿ ನಡೆಯಲಿರುವ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಜೂನ್‌ 3 ಕೊನೆಯ ದಿನ.

ಅದರ ಹಿಂದಿನ ದಿನವೇ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಮುಖ್ಯವಾಗಿ ನಾಮಪತ್ರ ಸಲ್ಲಿಕೆಗೆ ಅಗತ್ಯವಿರುವ ಶಾಸಕರ ಸಹಿ ಮತ್ತಿತರ ಪ್ರಕ್ರಿಯೆಗಳಿಗೆ ಸಂಬಂಧಿಸಿ ಅಂದು ಸೂಚನೆ ನೀಡಲಾಗುವುದು.

Congress: ನಾಡಿದ್ದು ಕಾಂಗ್ರೆಸ್‌ ಶಾಸಕಾಂಗ ಪಕ್ಷ ಸಭೆ

ಜತೆಗೆ ಜೂನ್‌ 3ರಂದು ಮೂರು ಶಿಕ್ಷಕರು ಮತ್ತು ಮೂರು ಪದವೀಧರರ ಕ್ಷೇತ್ರಗಳಿಂದ ಮೇಲ್ಮನೆಗೆ ನಡೆಯಲಿರುವ ಚುನಾವಣೆಯ ಪ್ರಚಾರ, ಅಂತಿಮ ಸಿದ್ಧತೆಗಳ ಕುರಿತೂ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

2ರಂದು ಸಂಜೆ 6 ಗಂಟೆಗೆ ನಗರದ ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಯಲಿದೆ. ಪಕ್ಷದ ಶಾಸಕರು, ವಿಧಾನ ಪರಿಷತ್ತಿನ ಸದಸ್ಯರು, ಸಂಸದರು ಮತ್ತಿತರರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಈ ಹಿಂದೆ ಜಂಟಿ ಅಧಿವೇಶನ ಮತ್ತು ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆದಿತ್ತು. ಹೆಚ್ಚು-ಕಡಿಮೆ ಮೂರು ತಿಂಗಳ ಬಳಿಕ ಸಭೆ ಕರೆಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವ ವಹಿಸಲಿದ್ದಾರೆ.


Spread the love

About Laxminews 24x7

Check Also

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.

Spread the love ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ. ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ