Breaking News

ಹೊಸ ವಂಟಮುರಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ: ಇಬ್ಬರ ಜಾಮೀನು ರದ್ದು

Spread the love

ಬೆಳಗಾವಿ: ತಾಲ್ಲೂಕಿನ ಹೊಸ ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ವಿದ್ಯುತ್‌ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ 12 ಆರೋಪಿಗಳಲ್ಲಿ ಇಬ್ಬರ ಜಾಮೀನು ರದ್ದು ಮಾಡಿ ನ್ಯಾಯಾಲಯ ಬುಧವಾರ ಆದೇಶ ಹೊರಡಿಸಿದೆ.

2018ರಲ್ಲಿ ಹೊಸ ವಂಟಮುರಿ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದ ಬಣ್ಣೆಪ್ಪ ಪಾಟೀಲ ಎಂಬುವರ ಕೊಲೆ ಯತ್ನ ನಡೆದಿತ್ತು.

ಆ ಪ್ರಕರಣದಲ್ಲಿ ಆಗಿನ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಪ್ಪ ರಾಯಪ್ಪ ವನ್ನೂರಿ ಹಾಗೂ ಬಸು ರುದ್ರಪ್ಪ ನಾಯಕ ಮುಖ್ಯ ಆರೋಪಿಗಳಾಗಿದ್ದರು. ಆಗಲೂ ನ್ಯಾಯಾಲಯವು ಇವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ಆದರೆ, 2023ರ ಡಿಸೆಂಬರ್‌ 11ರಂದು ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣದಲ್ಲಿ ಅವರು ಮತ್ತೆ ಆರೋಪಿಗಳಾಗಿದ್ದಾರೆ. ನ್ಯಾಯಾಲಯದ ಷರತ್ತು ಉಲ್ಲಂಘಿಸಿದ ಕಾರಣ 2018ರ ಪ್ರಕರಣದಲ್ಲಿ ನೀಡಿದ ಜಾಮೀನನ್ನು ರದ್ದು ಮಾಡುವಂತೆ ಸರ್ಕಾರದ ಪರವಾಗಿ ಅರ್ಜಿ ಸಲ್ಲಿಸಲಾಗಿತ್ತು. ಇದರ ವಿಚಾರಣೆ ನಡೆಸಿದ 11ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ಇಬ್ಬರ ಜಾಮೀನು ರದ್ದು ಮಾಡಿದೆ.

ಪ್ರೇಮಿಗಳಿಬ್ಬರು ಮನೆ ಬಿಟ್ಟು ಹೋದರು ಎಂಬ ಕಾರಣಕ್ಕೆ ಯುವತಿಯ ತಂದೆ, ತಾಯಿ, ಸಹೋದರರು ಸಂಬಂಧಿಕರು ಸೇರಿಕೊಂಡು 2023ರ ಡಿಸೆಂಬರ್‌ 11ರಂದು ಯುವಕನ ಮನೆ ಧ್ವಂಸ ಮಾಡಿದ್ದರು. ಯುವಕನ ತಾಯಿಯನ್ನು ಬೆತ್ತಲೆ ಮಾಡಿ ಮೂರು ತಾಸು ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್‌ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದೆ.


Spread the love

About Laxminews 24x7

Check Also

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.

Spread the love ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ. ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ