Breaking News

ಪ್ರಜ್ವಲ್ ರೇವಣ್ಣ 6 ದಿನ ಪೊಲೀಸ್ ಕಸ್ಟಡಿಗೆ

Spread the love

ಬೆಂಗಳೂರು ಮೇ 31: ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

ಬೆಂಗಳೂರು ನ್ಯಾಯಾಲಯಕ್ಕೆ ಇಂದು ಪ್ರಜ್ವಲ್ ರೇವಣ್ಣ ಅವರನ್ನು ಹಾಜರುಪಡಿಸಲಾಗಿತ್ತು. ವಾದ ಪ್ರತಿವಾದಗಳ ನಂತರ ಅವರನ್ನು ಕೋರ್ಟ್ ಆರು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.

ಲೈಂಗಿಕ ಕಿರುಕುಳ ಆರೋಪದ ವಿಚಾರಣೆಗಾಗಿ ಎಸ್‌ಐಟಿ ಪ್ರಜ್ವಲ್ ರೇವಣ್ಣ ಅವರನ್ನು ಕಸ್ಟಡಿಗೆ ನೀಡುವಂತೆ ಕೋರಿತ್ತು.

ಇದೇ ವೇಳೆ ವಕೀಲರ ಭೇಟಿ ಹಾಗೂ ವೈದ್ಯಕೀಯ ಚಿಕಿತ್ಸೆಗೆ ಅವಕಾಶ ನೀಡಿದ ಕೋರ್ಟ್ ಕಸ್ಟಡಿಯಲ್ಲಿ ಕಿರುಕುಳ ನೀಡದಂತೆ ತನಿಖಾಧಿಕಾರಿಗಳಿಗೆ ಸೂಚನೆ ನೀಡಿದೆ. ಹೊಳೆನರಸೀಪುರದಲ್ಲಿ ಪ್ರಜ್ವಲ್ ವಿರುದ್ಧ ದಾಖಲಾಗಿರುವ ಮೊದಲ ಎಫ್‌ಐಆರ್ ಬಗ್ಗೆ ಅವರ ವಿಚಾರಣೆ ನಡೆಯಲಿದೆ.


Spread the love

About Laxminews 24x7

Check Also

ಬಿಜೆಪಿ-ಜೆಡಿಎಸನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??

Spread the loveಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ