Breaking News

ಸರ್ಕಾರ ಕೂಡಲೇ ನಾಗೇಂದ್ರ ರಾಜೀನಾಮೆ ಪಡೆಯಬೇಕು: ಶೆಟ್ಟರ್

Spread the love

ಹುಬ್ಬಳ್ಳಿ: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಕೂಡಲೇ ಸರ್ಕಾರ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಒತ್ತಾಯಿಸಿದರು.

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ನಾಚಿಕೆಯಿಲ್ಲ.

Hubli; ಸರ್ಕಾರ ಕೂಡಲೇ ನಾಗೇಂದ್ರ ರಾಜೀನಾಮೆ ಪಡೆಯಬೇಕು: ಶೆಟ್ಟರ್ ಆಗ್ರಹ

ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌ನ ಆಂತರಿಕ ಹಾಗೂ ಸಿಎಂ, ಡಿಸಿಎಂ ನಡುವಿನ ಕಲಹ ಹೊರಗಡೆ ಬರಲಿದೆ. ಕಾಂಗ್ರೆಸ್‌ನವರ ಅಸಮಾಧಾನದಿಂದ ಸರ್ಕಾರ ಬೀಳುತ್ತದೆ. ಹೀಗಿದ್ದಾಗ ಬಿಜೆಪಿಯವರು ಆಪರೇಷನ್ ಕಮಲ ಮಾಡುವ ಅವಶ್ಯಕತೆಯಿಲ್ಲ ಎಂದರು.

ಯಾಗ ಮಾಡಿಸುವುದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಎಕ್ಸಪರ್ಟ್. ಕೇರಳ ಅಲ್ಲ ಭೂಗತದಲ್ಲಿ ಹೋಗಿಯಾದರೂ ಯಾಗ ಮಾಡಿಸುವ ತಾಕತ್ತು ಡಿಕೆಶಿಗೆ ಇದೆ. ಯಾಗ ಪೂಜೆ ಮಾಡುವುದರಲ್ಲಿ ಅವರು ಎಕ್ಸಪರ್ಟ್. ಯಾಗದಿಂದ ಒಬ್ಬರಿಗೆ ತೊಂದರೆ ಆಗುತ್ತದೆ ಎಂದರೆ ಎಲ್ಲರೂ ಅದನ್ನೇ ಮಾಡುತ್ತಿದ್ದರು. ನಾನು ಬಸವ ತತ್ವದವನು. ಅದರ ಮೇಲೆ ನಂಬಿಕೆಯಿಲ್ಲ. ಹೀಗಾಗಿ ಈ ಬಗ್ಗೆ ಡಿಕೆಶಿಗೆ ಕೇಳಿ ಎಂದರು.

ಮೋದಿ ಮೂರನೇ ಬಾರಿ ಪ್ರಧಾನಿ ಆಗಬೇಕು ಅನ್ನುವುದು ಜನರ ಆಶಯವಾಗಿತ್ತು. ಎಕ್ಸಿಟ್ ಪೋಲ್‌ನಲ್ಲಿ ಸ್ಪಷ್ಟ ಬಹುಮತ ಸಿಕ್ಕಿದೆ. ಹೀಗಾಗಿ ಫಲಿತಾಂಶದಲ್ಲಿ ನಮಗೆ 375 ಆಗಬಹುದು, 400ಕ್ಕೂ ಹೆಚ್ಚು ಸ್ಥಾನ ಗೆಲ್ಲಬಹುದು ಎಂದರು.


Spread the love

About Laxminews 24x7

Check Also

ಬಿಜೆಪಿ-ಜೆಡಿಎಸನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??

Spread the loveಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ