Breaking News

ಪಶು ಆಸ್ಪತ್ರೆ ಕ‌ಟ್ಟಡ ಕಳಪೆ ಕಾಮಗಾರಿ, ಮರು ನಿರ್ಮಾಣಕ್ಕೆ ಕಡಾಡಿ ಒತ್ತಾಯ

Spread the love

ಮೂಡಲಗಿ: ಬೆಳಗಾವಿ ಜಿಲ್ಲೆಯಲ್ಲಿ ಮಂಜೂರಾದ 4 ಪಶು ಆಸ್ಪತ್ರೆ ಕಟ್ಟಡಗಳ ಕಾಮಗಾರಿ ಗುಣಮಟ್ಟ ಕಳಪೆಯಾಗಿದ್ದು, ಇದಕ್ಕೆ ಕಾರಣರಾದ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಪಶು ಆಯುಕ್ತರನ್ನು ಒತ್ತಾಯಿಸಿದ್ದಾರೆ.

ಮೂಡಲಗಿ: ಪಶು ಆಸ್ಪತ್ರೆ ಕ‌ಟ್ಟಡ ಕಳಪೆ ಕಾಮಗಾರಿ, ಮರು ನಿರ್ಮಾಣಕ್ಕೆ ಕಡಾಡಿ ಒತ್ತಾಯ

ಪಟ್ಟಣದ ಪಶು ಆಸ್ಪತ್ರೆಯ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಪಶು ಚಿಕಿತ್ಸಾಲಯ ಮತ್ತು ಪಶು ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿ ಕಳಪೆ ಮಟ್ಟದಲ್ಲಿ ಕೈಗೊಂಡಿರುವ ಬಗ್ಗೆ ದೂರುಗಳು ಬಂದ ಹಿನ್ನಲೆಯಲ್ಲಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಸಮರ್ಪಕ ರೀತಿಯಲ್ಲಿ ಸಾಮಗ್ರಿಗಳನ್ನು ಬಳಸದೆ ಕಾಟಾಚಾರಕ್ಕಾಗಿ ಕಾಮಗಾರಿ ಮಾಡುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿಯ ಬಗ್ಗೆ ಗಮನ ನೀಡಿಲ್ಲ ಎಂದು ದೂರಿದರು.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ ಮೂಡಲಗಿ, ಖನಗಾಂವ, ಯರಗಟ್ಟಿ ಹಾಗೂ ಕಿತ್ತೂರನಲ್ಲಿ ಆಯ್‌ಆರ್‌ಡಿಎಫ್‌ ಟ್ರಾಂಚ್-17ನೇ ಯೋಜನೆಯಡಿಯಲ್ಲಿ ಪಶು ಚಿಕಿತ್ಸಾಲಯ ಮತ್ತು ಪಶು ಆಸ್ಪತ್ರೆಗಳ ನೂತನ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ₹199.13 ಲಕ್ಷ ಅನುದಾನದಲ್ಲಿ, ರಾಜ್ಯ ಸರ್ಕಾರಿ ಸ್ವಾಮ್ಯದ ನಿರ್ಮಾಣ ಸಂಸ್ಥೆಯಾದ ಕರ್ನಾಟಕ ಸ್ಟೇಟ್ ಹ್ಯಾಬಿಟೇಟ್ ಸೆಂಟರ್ ಬೆಂಗಳೂರು ಸಂಸ್ಥೆಗೆ ಮಂಜೂರಾತಿ ನೀಡಲಾಗಿದೆ ಎಂದರು.

ಗುತ್ತಿಗೆದಾರರು ಆಗಸ್ಟ್ 2023ರಲ್ಲಿ ಕಾಮಗಾರಿ ಪ್ರಾರಂಭಿಸಿ ಜುಲೈ 2024 ರಲ್ಲಿ ಮುಕ್ತಾಯಗೊಳಿಸುವ ನಿಬಂಧನೆಗೆ ಒಳಪಟ್ಟು ಟೆಂಡರ್‌ ಪಡೆದುಕೊಂಡಿದ್ದಾರೆ


Spread the love

About Laxminews 24x7

Check Also

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.

Spread the love ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ. ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ