ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಿಡಿಯನ್ ಭಾರತಿ ಸಿಂಗ್ ನಿವಾಸದ ಮೇಲೆ ಎನ್‍ಸಿಬಿ ಅಧಿಕಾರಿಗಳು ನಡೆಸಿದ್ದಾರೆ.
ಭಾರತಿ ಸಿಂಗ್ ಮತ್ತು ಪತಿ ಹರ್ಷ್ ಇಬ್ಬರೂ ಡ್ರಗ್ಸ್ ಸೇವನೆ ಮಾಡುತ್ತಿರುವ ಬಗ್ಗೆ ಆರೋಪಗಳು ಕೇಳಿ ಬಂದಿವೆ.ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣ ದಾಖಲಿಸಿಕೊಂಡಿದ್ದ ಎನ್‍ಸಿಬಿ ತನ್ನ ಬೇಟೆಯನ್ನು ಮುಂದುವರಿಸಿದೆ. ಈಗಾಗಲೇ ನಟಿ ರಿಯಾ ಚಕ್ರವರ್ತಿ ಜೈಲು ವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿದ್ದಾರೆ.
ನಟಿಯರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್, ಸಾರಾ ಅಲಿ ಖಾನ್ ಮತ್ತು ರಕುಲ್ ಪ್ರೀತ್ ಸಿಂಗ್ ಸಹ ಎನ್‍ಸಿಬಿ ವಿಚಾರಣೆಯನ್ನ ಎದುರಿಸಿದ್ದಾರೆ.