ಸೋಮವಾರದಿಂದ ದೇಶದಾದ್ಯಂತ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಶುಲ್ಕವನ್ನು 3-5% ರಷ್ಟು ಹೆಚ್ಚಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲೋಕಸಭಾ ಚುನಾವಣೆ ಕಾರಣದಿಂದಾಗಿ ಏಪ್ರಿಲ್‌ನಲ್ಲಿ ವಾರ್ಷಿಕ ಹೆಚ್ಚಳವನ್ನು ತಡೆ ಹಿಡಿಯಲಾಗಿತ್ತು.
ಭಾರತದಲ್ಲಿನ ಟೋಲ್ ಶುಲ್ಕಗಳನ್ನು ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಪರಿಷ್ಕರಿಸಲಾಗುತ್ತದೆ ಮತ್ತು ಹೆದ್ದಾರಿ ನಿರ್ವಾಹಕರು ಸೋಮವಾರದಿಂದ ಸುಮಾರು 1,100 ಟೋಲ್ ಪ್ಲಾಜಾಗಳಲ್ಲಿ 3% ರಿಂದ 5% ರಷ್ಟು ಹೆಚ್ಚಳ ಮಾಡಲಿದ್ದು, ಸ್ಥಳೀಯ ಪತ್ರಿಕೆಗಳಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದು ವರದಿಯಾಗಿದೆ.
“ಲೋಕಸಭಾ ಚುನಾವಣೆ ಪ್ರಕ್ರಿಯೆ ಮುಗಿದಿದ್ದು, ನೀತಿ ಸಂಹಿತೆ ಕಾರಣ ತಡೆಹಿಡಿಯಲಾದ ಬಳಕೆದಾರರ ಶುಲ್ಕ ದರಗಳ ಪರಿಷ್ಕರಣೆಯು ಜೂನ್ 3 ರಿಂದ ಜಾರಿಗೆ ಬರಲಿದೆ” ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.