Breaking News

ಸೋಮವಾರದಿಂದ ದೇಶಾದ್ಯಂತ ಟೋಲ್ ದರ ಹೆಚ್ಚಳ

Spread the love

ಸೋಮವಾರದಿಂದ ದೇಶದಾದ್ಯಂತ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಶುಲ್ಕವನ್ನು 3-5% ರಷ್ಟು ಹೆಚ್ಚಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲೋಕಸಭಾ ಚುನಾವಣೆ ಕಾರಣದಿಂದಾಗಿ ಏಪ್ರಿಲ್‌ನಲ್ಲಿ ವಾರ್ಷಿಕ ಹೆಚ್ಚಳವನ್ನು ತಡೆ ಹಿಡಿಯಲಾಗಿತ್ತು.

ಭಾರತದಲ್ಲಿನ ಟೋಲ್ ಶುಲ್ಕಗಳನ್ನು ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಪರಿಷ್ಕರಿಸಲಾಗುತ್ತದೆ ಮತ್ತು ಹೆದ್ದಾರಿ ನಿರ್ವಾಹಕರು ಸೋಮವಾರದಿಂದ ಸುಮಾರು 1,100 ಟೋಲ್ ಪ್ಲಾಜಾಗಳಲ್ಲಿ 3% ರಿಂದ 5% ರಷ್ಟು ಹೆಚ್ಚಳ ಮಾಡಲಿದ್ದು, ಸ್ಥಳೀಯ ಪತ್ರಿಕೆಗಳಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದು ವರದಿಯಾಗಿದೆ.Toll Fee Hike: ಸೋಮವಾರದಿಂದ ದೇಶಾದ್ಯಂತ ಟೋಲ್ ದರ ಹೆಚ್ಚಳ

 

“ಲೋಕಸಭಾ ಚುನಾವಣೆ ಪ್ರಕ್ರಿಯೆ ಮುಗಿದಿದ್ದು, ನೀತಿ ಸಂಹಿತೆ ಕಾರಣ ತಡೆಹಿಡಿಯಲಾದ ಬಳಕೆದಾರರ ಶುಲ್ಕ ದರಗಳ ಪರಿಷ್ಕರಣೆಯು ಜೂನ್ 3 ರಿಂದ ಜಾರಿಗೆ ಬರಲಿದೆ” ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.


Spread the love

About Laxminews 24x7

Check Also

12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ 65ರ ವೃದ್ಧ

Spread the loveಕಾರವಾರ: ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆಘಾತಕಾರಿ ಪ್ರಕರಣ ಮುಂಡಗೋಡು ತಾಲೂಕಿನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ