ಲೋಕಸಭಾ ಕ್ಷೇತ್ರದ ಮತ ಎಣಿಕೆಯು ಜೂನ್ 4ರಂದು ನಡೆಯಲಿದ್ದು, ಎಣಿಕೆ ಕಾರ್ಯಕ್ಕಾಗಿ ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆ ಕೈಗೊಂಡಿದೆ.
ಚಾಮರಾಜನಗರದ ತಾಲೂಕಿನ ಬೇಡರಪುರದಲ್ಲಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯವು ಬೆಳಗ್ಗೆ (ಜೂನ್ 04) 8 ಗಂಟೆಗೆ ಆರಂಭ ಆಗಲಿದೆ.
ಎಣಿಕೆ ಕಾರ್ಯವನ್ನು ಸುಲಲಿತವಾಗಿ ನಡೆಸುವ ಸಲುವಾಗಿ ಕಂಪ್ಯೂಟರ್, ಸ್ಕ್ಯಾನರ್, ಪ್ರಿಂಟರ್ಸ್, ಯುಪಿಎಸ್, ಟೆಲಿಫೋನ್, ಇಂಟರ್‌ನೆಟ್ ವ್ಯವಸ್ಥೆ ಕಲ್ಪಿಸಲಾಗಿದೆ. ಎಣಿಕೆ ಕಾರ್ಯವನ್ನು ಶಾಂತಿ ಮತ್ತು ಸುವ್ಯವಸ್ಥೆ ಮತ್ತು ಸುರಕ್ಷಿತವಾಗಿ ನಡೆಸಲು ಅಗತ್ಯ ಬ್ಯಾರಿಕೇಡಿಂಗ್, ಸಿಗ್ನಲ್ಸ್ ಮತ್ತು ವಾಹನ ನಿಲುಗಡೆಯನ್ನು ಕಲ್ಪಿಸಲಾಗಿದೆ.
ಅಂಚೆ ಮತಪತ್ರಗಳ ಮೂಲಕ ಒಟ್ಟು 4,405 ಮತ ಚಲಾವಣೆಯಾಗಿವೆ. ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆಯು ತಲಾ 14 ಟೇಬಲ್(ಮೇಜು)ಗಳಲ್ಲಿ ನಡೆಯಲಿದೆ. ಪ್ರತಿ ಟೇಬಲ್‍ಗೆ ತಲಾ 14 ಮಂದಿ ಮತ ಎಣಿಕೆ ಮೇಲ್ವಿಚಾರಕರು, 14 ಮಂದಿ ಎಣಿಕೆ ಸಹಾಯಕರು, 14 ಮಂದಿ ಮೈಕ್ರೋ ಅಬ್ಸರ್‍ವರ್ ಹಾಗೂ ಅಂಚೆ ಮತ ಪತ್ರ ಎಣಿಕೆಗೆ 5 ಮಂದಿ ಸೇರಿ ಒಟ್ಟು 45 ಸಿಬ್ಬಂದಿ ಇರಲಿದ್ದಾರೆ.
ಅಂಚೆ ಮತ ಪತ್ರ ಎಣಿಕೆಗೆ 8 ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದ್ದು, 8 ಮಂದಿ ಏಜೆಂಟರ್‌ಗಳನ್ನು ನೇಮಕ ಮಾಡಲಾಗಿದೆ. ಅಂಚೆ ಮತಪತ್ರಗಳ ಎಣಿಕೆಯು ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಅವರ ಸಮ್ಮುಖದಲ್ಲಿ ನಡೆಯಲಿದೆ.
ಇವಿಎಂ ಮತ ಯಂತ್ರಗಳ ಮೂಲಕ ಮತ ಎಣಿಕೆಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಏಜೆಂಟರ್‌ನಂತೆ ಒಟ್ಟು 120 ಮಂದಿ ಎಣಿಕೆ ಏಜೆಂಟರ್ ಅನ್ನು ನೇಮಕಾತಿ ಮಾಡಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಮತ ಎಣಿಕೆ ಟೇಬಲ್‍ಗಳಂತೆ ಒಟ್ಟು 112 ಮತ ಎಣಿಕೆ ಟೇಬಲ್‍ಗಳನ್ನು ಸ್ಥಾಪಿಸಲಾಗಿರುತ್ತದೆ.