ಬೆಂಗಳೂರು ಜೂನ್ 3: ಲೋಕಸಭಾ ಚುನಾವಣೆ ಫಲಿತಾಂಶ ಹೊರಬೀಳಲು ಇನ್ನೇನು ಕೇವಲ ಒಂದೇ ಒಂದು ದಿನ ಬಾಕಿ ಇದೆ. ಮಂಗಳವಾರ (ಜೂನ್ 4) ರಂದು ಫಲಿತಾಂಶ ಹೊರಬೀಳಲಿದ್ದು ಪ್ರಬಲ ಪಕ್ಷಗಳ ಭವಿಷ್ಯ ನಿರ್ಧಾರವಾಗಲಿದೆ.
ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದೆ.
ವಿಧಾನಸಭೆ ಚುನಾವಣೆ ಪೂರ್ವ ಕಾಂಗ್ರೆಸ್ ನೀಡಿದ ಭರವಸೆಗಳು ಜಾರಿಗೆ ಬಂದ ಬೆನ್ನಲ್ಲೇ ಈ ಬಾರಿ ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಗಾಗಿ ಸೋಲು ಗೆಲುವಿನ ಲೆಕ್ಕಾಚಾರಗಳು ನಡೆಯುತ್ತಿವೆ.
ರಾಜ್ಯ ರಾಜಕಾರಣದಲ್ಲಿ ಈ ಬಾರಿ ಫಲಿತಾಂಶ ಹೇಗಿರಲಿದೆ ಎನ್ನುವ ಚರ್ಚೆಗಳು ಕಾಂಗ್ರೆಸ್ ಪಾಳಯದಲ್ಲಿ ನಡೆದಿವೆ. ಈ ಬಗ್ಗೆ ಭಾನುವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲೂ ಈ ವಿಚಾರವಾಗಿ ಮಾತುಕತೆಗಳು ನಡೆದಿವೆ. ಸಮೀಕ್ಷೆಗಳ ಬ್ಗೆ ಚರ್ಚೆ ಮಾಡಲಾಗಿದೆ.
ಕೆಲವರು ತಮ್ಮ ಕ್ಷೇತ್ರದಲ್ಲಿ ಪರಿಸ್ಥಿತಿ ಹೇಗಿತ್ತು ಎಂಬ ವಿಚಾರವನ್ನೂ ಪ್ರಸ್ತಾಪಿಸಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಸಮೀಕ್ಷೆಗಳ ಭವಿಷ್ಯ ನಿಜವಾಗಲು ಸಾಧ್ಯವಿಲ್ಲ ಬದಲಾಗಿ ಎರಡಂಕಿಯ ದಾಟುತ್ತೇವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.