ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ (Priyanka Jarakiholi) ಅವರು ಕಣದಲ್ಲಿದ್ದರು. ಪ್ರಿಯಾಂಕಾ ಸತೀಶ್ ಜಾರಕಿಹೊಳಿ ಇದೇ ಮೊದಲ ಬಾರಿಗೆ ಚುನಾವಣೆ ಎದುರಿಸಿದ್ದು, ಮೊದಲ ಚುನಾವಣೆಯಲ್ಲೇ ಗೆಲುವು ಸಾಧಿಸಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಕಣದಲ್ಲಿದ್ದರು. ಲಿಂಗಾಯತ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಗೆಲುವಿನ ವಿಶ್ವಾಸ ಹೊಂದಿತ್ತು. ಆದರೆ ಅನುಭವಿ ರಾಜಕಾರಣಿ ಜಗದೀಶ್ ಶೆಟ್ಟರ್ ಅವರ ವಿರುದ್ಧ ಸೋಲು ಕಂಡಿದ್ದಾರೆ.
ಬೀದರ್ ಲೋಕಸಭಾ ಕ್ಷೇತ್ರದಲ್ಲಿ 1991ರಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸಿತ್ತು. ಅಲ್ಲಿಂದ ಇಲ್ಲಿಯವರೆಗೆ ಬಿಜೆಪಿ ಇಲ್ಲಿ ಹಿಡಿತ ಸಾಧಿಸಿಕೊಂಡು ಬಂದಿದೆ. ಹೀಗಾಗಿ ಈ ಬಾರಿ ಸಚಿವ ಈಶ್ವರ್ ಖಂಡ್ರೆ ಅವರ ಪುತ್ರ ಸಾಗರ್ ಖಂಡ್ರೆ ಮೂಲಕ ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಗೆಲ್ಲುವ ಕನಸು ಕಂಡಿತ್ತು. ಈ ಕನಸು ನನಸಾಗಿದ್ದು, ಸಾಗರ ಖಂಡ್ರೆ ಅವರು ವಿಜಯಶಾಲಿಯಾಗಿದ್ದಾರೆ.