ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಅಂಬರೀಶ್ ಸೋಲು ಕಂಡಿದ್ದಾರೆ. ಮೃಣಾಲ್ ಸೋಲಿಸಲು ಜಾರಕಿಹೊಳಿ ಸಹೋದರರು ಸೈಲೆಂಟ್ ಆಗಿ ಸೂತ್ರ ಹೆಣೆದಿದ್ದರು. ಇದೀಗ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸೇಡು ತೀರಿಸಿಕೊಂಡಿದ್ದು, ಜಗದೀಶ್ ಶೆಟ್ಟರ್ ಗೆಲ್ಲಿಸುವಲ್ಲಿ ಜಾರಕಿಹೊಳಿ ಸಹೋದರರ ಯಶಸ್ವಿ ಆಗಿದ್ದಾರೆ.
ಬೆಳಗಾವಿ, ಜೂನ್ 04: ರಾಜ್ಯದ ಪ್ರಭಾವಿ ರಾಜಕೀಯ ಕುಟುಂಬಗಳಲ್ಲಿ ಬೆಳಗಾವಿಯ ಜಾರಕಿಹೊಳಿ ಕುಟುಂಬವೂ ಒಂದು. ಯಾವುದೇ ಸರ್ಕಾರ ಇರಲಿ ಅಲ್ಲಿ ಜಾರಕಿಹೊಳಿ ಕುಟುಂಬದ ಓರ್ವ ಸದಸ್ಯ ಸಚಿವರಾಗಿರುತ್ತಾರೆ.
ಅಷ್ಟರ ಮಟ್ಟಿಗೆ ಜಾರಕಿಹೊಳಿ ಸಹೋದರರು ರಾಜ್ಯ ರಾಜಕಾರಣದಲ್ಲಿ ಪ್ರಭಾವ ಹೊಂದಿದ್ದಾರೆ. ಬೆಳಗಾವಿ (Belagavi) ಜಿಲ್ಲೆಯಲ್ಲಿ ಪ್ರತಿ ಚುನಾವಣೆಗಳಲ್ಲೂ ತಮ್ಮದೇಯಾದ ಹಿಡಿತ ಹೊಂದಿದ್ದಾರೆ.
ರಮೇಶ್ ಜಾರಕಿಹೊಳಿ (Ramesh Jarkiholi) ಮತ್ತು ಬಾಲಚಂದ್ರ ಜಾರಕಿಹೊಳಿ ಬಿಜೆಪಿಯಲ್ಲಿದ್ದರೆ, ಸತೀಶ್ ಜಾರಕಿಹೊಳಿ ಕಾಂಗ್ರೆಸ್ನಲ್ಲಿದ್ದಾರೆ.
ಇವರು ಬೇರೆ ಬೇರೆ ಕ್ಷೇತ್ರಗಳಲ್ಲಿ ಇದ್ದರೂ ಸಹ ಅವರದ್ದೇಯಾದ ರಾಜಕೀಯ ಹಿಡಿತ, ಪ್ರಭಾವ ಹೊಂದಿದ್ದಾರೆ.
ಅದನ್ನೂ ಇದೀಗ ಲೋಕಸಸಭಾ ಚುನಾವಣೆಯಲ್ಲಿ ತೋರಿಸಿದ್ದಾರೆ. ಹೌದು.. ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ತಮ್ಮ ಪುತ್ರಿ ಪ್ರಿಯಾಂಕಳನ್ನು ಗೆಲ್ಲಿಸಿಕೊಂಡಿದ್ದರೆ, ಇತ್ತ ರಮೇಶ್ ಜಾಕಿಹೊಳಿ ಹಾಗೂ ಚಾಲಚಂದ್ರ ಜಾರಕಿಹೊಳಿ ಬೆಳಗಾವಿಯಲ್ಲಿ ಜಗದೀಶ ಶೆಟ್ಟರ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಈ ಮೂಲಕ ಇವರಿಬ್ಬರು ತಮ್ಮ ರಾಜಕೀಯ ಬದ್ಧ ವರಿ ಲಕ್ಷ್ಮಿ ಹೆಬ್ಬಾಳ್ಕರ್ ಶಾಕ್ ಕೊಟ್ಟಿದ್ದಾರೆ.