Breaking News

ಗೋಕಾಕ ಜನತೆಯ ರೈತರ ಪಾಲಿಗೆ ಖುಷಿ ವಿಚಾರ ಕೊಟ್ಟ ಸಾಹುಕಾರರು

Spread the love

ಘಟಪ್ರಭಾ : ಹಿಡಕಲ್ ಜಲಾಶಯದಿಂದ ಇಂದಿನಿಂದ ೧೫ ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು ೬.೮೦ ಟಿಎಂಸಿ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.

ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶನಿವಾರ ಬೆಳಿಗ್ಗೆ ೧೦.೩೦ ಗಂಟೆಗೆ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆಯಾಗಿದೆ ಎಂದು ಅವರು ಹೇಳಿದ್ದಾರೆ.

ಘಟಪ್ರಭಾ ಎಡದಂಡೆ ಕಾಲುವೆಗೆ ೨೪೦೦ ಕ್ಯೂಸೆಕ್ಸ್, ಘಟಪ್ರಭಾ ಬಲದಂಡೆ ಕಾಲುವೆಗೆ ೨೦೦೦ ಕ್ಯೂಸೆಕ್ಸ್ ಮತ್ತು ಸಿಬಿಸಿ ಕಾಲುವೆಗೆ ೫೫೦ ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗಿದೆ. ನ.೨೧ ರಿಂದ ಡಿ.೫ ರವರೆಗೆ ಒಟ್ಟು ೧೫ ದಿನಗಳವರೆಗೆ ಸುಮಾರು ೬.೮೦ ಟಿಎಂಸಿ ನೀರನ್ನು ಹರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಗೋಕಾಕ, ಮೂಡಲಗಿ, ರಾಯಬಾಗ, ಮುಧೋಳ, ಬೀಳಗಿ, ಜಮಖಂಡಿ ತಾಲೂಕುಗಳ ರೈತರು ಇದರ ಸದ್ಬಳಕೆ ಮಾಡಿಕೊಳ್ಳಬೇಕು. ಅನಾವಶ್ಯಕವಾಗಿ ನೀರನ್ನು ಪೋಲು ಮಾಡಬಾರದು.

ಕೃಷಿ ಜಮೀನುಗಳಿಗೆ ಅನುಕೂಲವಾಗಲು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಹಿಡಕಲ್ ಜಲಾಶಯದಿಂದ ಎಲ್ಲ ಕಾಲುವೆಗಳಿಗೆ ನೀರು ಹರಿಸಲು ಅಧಿಕಾರಿಗಳಿಗೆ ಅವರು ಆದೇಶ ನೀಡಿದ್ದಾರೆ. ಅದಕ್ಕಾಗಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಸಮಸ್ತ ರೈತ ಬಾಂಧವರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಭೂಮಿ‌ ಇರೋವರೆಗೂ ಬಸವಣ್ಣನವರ ವಿಚಾರಧಾರೆಗಳನ್ನ ಕಾಪಾಡಬೇಕು: ಬಸವ ಸಂಸ್ಕೃತಿ ಅಭಿಯಾನದಲ್ಲಿ ಸತೀಶ ಜಾರಕಿಹೊಳಿ

Spread the loveಬೆಳಗಾವಿ: “ಭೂಮಿ ಇರುವವರೆಗೆ ಬಸವಣ್ಣನವರ ವಿಚಾರಗಳನ್ನು ಕಾಪಾಡುವ ಪ್ರಯತ್ನ ಮಾಡಬೇಕಿದೆ. ದೇಶದಲ್ಲಿ ಮೂಲ ವಿಚಾರ ಮತ್ತು ಇತಿಹಾಸವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ