Breaking News

ಬಿಟ್‌ ಕಾಯಿನ್ ಪ್ರಕರಣ: ಡಿವೈಎಸ್ಪಿ ಮತ್ತೆ ಪರಾರಿ

Spread the love

ಬೆಂಗಳೂರು: ಬಿಟ್ ಕಾಯಿನ್ (ಬಿಟಿಸಿ) ಹಗರಣದ ಸಾಕ್ಷ್ಯಗಳನ್ನು ನಾಶಪಡಿಸಿದ್ದ ಪ್ರಕರಣದ ಆರೋಪಿಯಾಗಿರುವ ಡಿವೈಎಸ್ಪಿ ಶ್ರೀಧರ್ ಕೆ. ಪೂಜಾರ ಮತ್ತೆ ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಎಸ್‌ಐಟಿ ಅಧಿಕಾರಿಗಳು ಶೋಧ ಮುಂದುವರಿಸಿದ್ದಾರೆ.

ಬಿಟ್ ಕಾಯಿನ್ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಅಂತರರಾಷ್ಟ್ರೀಯ ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನನ್ನು ಬಂಧಿಸಿದ್ದ ಅಂದಿನ ಸಿಸಿಬಿ ಪೊಲೀಸರು, ಆತನಿಂದ ಹಲವು ವಸ್ತುಗಳನ್ನು ಜಪ್ತಿ ಮಾಡಿ ಸಾಕ್ಷ್ಯ ನಾಶಪಡಿಸಿದ್ದರು.

ಈ ಸಂಬಂಧ ಅಂದಿನ ಸಿಸಿಬಿ ಇನ್‌ಸ್ಪೆಕ್ಟರ್‌ಗಳಾಗಿದ್ದ ಶ್ರೀಧರ್ ಪೂಜಾರ, ಲಕ್ಷ್ಮಿಕಾಂತಯ್ಯ, ಚಂದ್ರಾಧರ್, ಡಿ.ಎಂ. ಪ್ರಶಾಂತಬಾಬು ಹಾಗೂ ಸೈಬರ್ ತಜ್ಞ ಸಂತೋಷ್‌ಕುಮಾರ್ ವಿರುದ್ಧ ಸಿಐಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಪ್ರಶಾಂತ್ ಹಾಗೂ ಸಂತೋಷ್‌ ಅವರನ್ನು ಬಂಧಿಸಲಾಗಿತ್ತು.


Spread the love

About Laxminews 24x7

Check Also

ನೀಟ್ ರದ್ಧತಿಗೆ ಮನನೊಂದು ಸರಣಿ ಆತ್ಮಹತ್ಯೆ – ನಾಲ್ವರು ಆಕಾಂಕ್ಷಿಗಳು ಸೂಸೈಡ್

Spread the loveನವದೆಹಲಿ: ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆ ರದ್ದುಗೊಂಡ ಹಿನ್ನೆಲೆ ಆಘಾತಕ್ಕೊಳಗಾಗಿ ನಾಲ್ವರು ನೀಟ್ ಆಕಾಂಕ್ಷಿಗಳು ಆತ್ಮಹತ್ಯೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ