Breaking News

ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ

Spread the love

ವದೆಹಲಿ: ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ಬುಧವಾರ ರಾಜೀನಾಮೆ ಸಲ್ಲಿಸಿದರು.

ತಮ್ಮ ಸಂಪುಟ ಸಹದ್ಯೋಗಿಗಳ ಜೊತೆ ರಾಷ್ಟ್ರಪತಿ ಭವನಕ್ಕೆ ತೆರಳಿದ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.

ರಾಜೀನಾಮೆ ಪತ್ರ ಸ್ವೀಕರಿಸಿದ ದ್ರೌಪದಿ ಮುರ್ಮು ಹೊಸ ಸರ್ಕಾರ ಅಧಿಕಾರ ವಹಿಸಿಕೊಳ್ಳುವವರೆಗೂ ಪ್ರಧಾನಿಯಾಗಿ ಮುಂದುವರಿಯುವಂತೆ ಅವರು ಸೂಚಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ.ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ

ನಿನ್ನೆ ಕೇಂದ್ರ ಸಚಿವ ಸಂಪುಟವು 17ನೇ ಲೋಕಸಭೆಯನ್ನು ವಿಸರ್ಜಿಸಲು ಶಿಫಾರಸು ಮಾಡಿತ್ತು. ಪ್ರಸ್ತುತ 17ನೇ ಲೋಕಸಭೆ ಅವಧಿ ಜೂನ್ 16ರಂದು ಕೊನೆಗೊಳ್ಳಲಿದೆ.

ಲೋಕಸಭಾ ಚುನಾವಣೆಯ ಫಲಿತಾಂಶ ನಿನ್ನೆ ಹೊರಬಂದಿದ್ದು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಬಹುಮತವನ್ನು ಪಡೆದುಕೊಂಡಿದೆ.

543 ಸ್ಥಾನಗಳಲ್ಲಿ ಎನ್‌ಡಿಎ 292 ಸ್ಥಾನಗಳನ್ನು ಪಡೆದುಕೊಂಡಿದೆ. 240 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ, 2014ರ ನಂತರ ಮೊದಲ ಬಾರಿಗೆ ಮ್ಯಾಜಿಕ್ ಸಂಖ್ಯೆ (272) ಗಿಂತ ಕಡಿಮೆ ಸ್ಥಾನಗಳನ್ನು ಪಡೆದಿದೆ. ಸರ್ಕಾರ ರಚನೆಗೆ ತನ್ನ ಮಿತ್ರಪಕ್ಷಗಳನ್ನು ಅವಲಂಬಿಸಿದೆ.

ಇಂಡಿಯಾ ಮೈತ್ರಿಕೂಟದ ಭಾಗವಾದ ಕಾಂಗ್ರೆಸ್‌ 99 ಸ್ಥಾನಗಳನ್ನು ಗೆದ್ದುಕೊಂಡಿದೆ.


Spread the love

About Laxminews 24x7

Check Also

ಬಿಜೆಪಿ-ಜೆಡಿಎಸನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??

Spread the loveಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ