ಮುಂಬೈ: ಮಹಾರಾಷ್ಟ್ರ ರಾಜ್ಯ ರಾಜಕೀಯದಲ್ಲಿ (Maharashtra state politics) ಮತ್ತೆ ಹೈಡ್ರಾಮಾ ಶುರುವಾಗಿದೆ. ಒಂದೆಡೆ ಏಕನಾಥ್ ಶಿಂಧೆ (Eknath Shinde) ಬಣದ ಶಿವಸೇನೆ (Shiva Sena) ನೂತನ ಸಂಸದರನ್ನು ಸೆಳೆಯಲು ಉದ್ಧವ್ ಠಾಕ್ರೆ (Uddhav Thackeray) ಬಣ ಪ್ರಯತ್ನಿಸುತ್ತಿದೆ ಎಂಬ ಮಾತು ಕೇಳಿ ಬಂದಿದೆ.
ಅದರ ನಡುವೆ ಇದೀಗ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ (DCM) ಸ್ಥಾನಕ್ಕೆ ರಾಜೀನಾಮೆ ನೀಡಲು ದೇವೇಂದ್ರ ಫಡ್ನವೀಸ್ (Devendra Fadnavis) ಮುಂದಾಗಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿದ ಅವರು, ಡಿಸಿಎಂ ಸ್ಥಾನದಿಂದ ತಮ್ಮನ್ನು ಮುಕ್ತಗೊಳಿಸುವಂತೆ ವರಿಷ್ಠರಿಗೆ ಮನವಿ ಮಾಡಿದ್ದಾರೆ. ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷ ಸಂಘಟನೆಗಾಗಿ ಕೆಲಸ ಮಾಡುತ್ತೀನಿ ಅಂತ ಹೇಳಿದ್ದಾರೆ.