Breaking News

ಸಂಜಯ ಪಾಟೀಲ ಹೇಳಿಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು

Spread the love

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಚನ್ನರಾಜ ಹಟ್ಟಿಹೊಳ್ಳಿ ಕಾಂಗ್ರೆಸ್ ಪ್ರಬಲ ಅಭ್ಯರ್ಥಿಯಲ್ಲ ಎಂಬ ಮಾಜಿ ಶಾಸಕ ಸಂಜಯ ಪಾಟೀಲ ಹೇಳಿಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ.

ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಬಗ್ಗೆ ಸಮಿತಿ ಸಭೆ ನಡೆಸಲಾಗಿದೆ. ಅಭ್ಯರ್ಥಿ ಆಯ್ಕೆ ಇನ್ನು ಅಂತಿಮ ಆಗಿಲ್ಲ. ಸಮಿತಿ ಅಧ್ಯಕ್ಷರು ಹೇಳಿದ ರೀತಿಯಲ್ಲಿ  ಒಂದು ವಾರದಲ್ಲಿ ಮತ್ತೊಮ್ಮೆ ಸಭೆ ನಡೆಸಲಾಗುತ್ತದೆ. ಬಳಿಕ ಅಭ್ಯರ್ಥಿ ಆಯ್ಕೆ ಮಾಡಲಾಗುತ್ತದೆ ಎಂದರು.

ಸಂಜಯ ಪಾಟೀಲ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರ ಪ್ರಶ್ನೆಗೆ 2023ಕ್ಕೆ ಉತ್ತರ ನೀಡುತ್ತೇನೆ. ನಮ್ಮ ಸಹೋದರ ಹೆಸರು ಈಗಾಗಲೇ ಹರಿದಾಡುತ್ತಿದ್ದೇ. ಆದರೆ ನಮ್ಮ ಸಹೋದರ ಚನ್ನರಾಜ ಹಟ್ಟಿಹೊಳ್ಳಿ ಅವರ ಆಯ್ಕೆ ಬಗ್ಗೆ ಹೈ ಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ. ಪಕ್ಷದ ನಿರ್ಧಾರಕ್ಕೆ ಬದ್ಧರಾಗಿದ್ಧೇವೆ ಎಂದು ಹೇಳಿದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ