Breaking News

ಶಿವರಾಜ್​ಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಬಹುದು

Spread the love

ಶಿವಮೊಗ್ಗ: ಕುಟುಂಬ ಕದನಕ್ಕೆ ಸಾಕ್ಷಿಯಾಗಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಗೆದ್ದು ಬೀಗಿದ್ದು, ಎದುರಾಳಿ ಕಾಂಗ್ರೆಸ್​ನ ಗೀತಾ ಶಿವರಾಜ್​ಕುಮಾರ್​ ಹಾಗೂ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪಗೆ ಸೋಲುಣಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆದರೆ, ಮಾಜಿ ಸಿಎಂ ದಿ. ಬಂಗಾರಪ್ಪ ಅವರ ಕುಟುಂಬದ ಕಲಹ ಚುನಾವಣೆ ಮುಗಿದರೂ ನಿಲ್ಲುವಂತೆ ಕಾಣುತ್ತಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ಮಾಜಿ ಶಾಸಕ ಕುಮಾರ್​ ಬಂಗಾರಪ್ಪ ಅವರು ಬರೆದಿರುವ ಸುದೀರ್ಘ ಪೋಸ್ಟ್​ ಸಾಮಾಜಿಕ ಜಾಲತಾಣಗಳಲ್ಲಿ ಸಖತ್​ ವೈರಲ್​ ಆಗಿದೆ.ಶಿವರಾಜ್​ಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಬಹುದು: ಗೀತಾ ಸೋಲಿಗೆ ಕುಮಾರ್​ ಬಂಗಾರಪ್ಪ ವ್ಯಂಗ್ಯ

ಬಂಗಾರಪ್ಪನವರನ್ನು ಕೇವಲ ಪ್ರಚಾರ ಸಾಮಗ್ರಿಯನ್ನಾಗಿ ಬಳಸಿಕೊಂಡ ಇವರಿಗೆ ತಕ್ಕ ಶಾಸ್ತಿಯಾಯಿತು. ಈ ಮಹಾಪರಾಧಕ್ಕಾಗಿ ಜಿಲ್ಲೆಯ, ಕ್ಷೇತ್ರದ ಜನರ ಕ್ಷಮಾಪಣೆ ಕೇಳಿ ಹೋಗಿಬರಲಿ, ಟಾಟಾ. ಮೇಲಾಗಿ,ಕನ್ನಡದ ಕಣ್ಮಣಿ ಡಾ. ರಾಜಕುಮಾರ್ ರವರ ಹೆಸರನ್ನು ದುರುಪಯೋಗ ಪಡಿಸಿಕೊಂಡಿದ್ದಲ್ಲದೆ ಅವರಿಗಿಲ್ಲದಿದ್ದ ಇಂಗಿತವನ್ನು ಇತ್ತೆoದು ಪ್ರಚುರಪಡಿಸಿ ಲಾಭ ಮಾಡಿಕೊಳ್ಳಬಯಸಿದ ಇವರಿಗೆ ಮಾಡಿದ್ದುಣ್ಣೋ ಮಹಾರಾಯ ಎಂಬಂತ ಸ್ಥಿತಿಯಾಗಿದೆ. ಉತ್ತಮ ಉದ್ದೇಶ ಇವರದ್ದಾಗಿದ್ದರೆ ಖಂಡಿತ ವಿಜಯಲಕ್ಷ್ಮಿ ಒಲಿಯುತ್ತಿದ್ದಳು, ಸ್ವಂತ ಸಹೋದರನ ಭವಿಷ್ಯಕ್ಕೆ ತೊಡರುಗಾಲು ಹಾಕಲೆಂದೇ ಬೆಂಗಳೂರಿನಿಂದ ಧಾವಿಸಿಬಂದು ತಿಳಿಯಾಗಿಸಬೇಕಿದ್ದ ವಾತಾವರಣವನ್ನು ಕಲುಷಿತಗೊಳಿಸಿ, ದಿಕ್ಕು ದೆಸೆ ಇಲ್ಲದಂತಾಗಿ ಹೋಗಿ ಗೂಡು ಸೇರಿಕೊಂಡಿದ್ದಾರೆ ಬೆಂಗಳೂರಿಗೆ, ಹಿಂತಿರುಗಿ ಬರುವುದು ಕನಸಿನ ಮಾತು.


Spread the love

About Laxminews 24x7

Check Also

ಕೇಂದ್ರದ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್ ನಾಯಕರಿಂದ ಸುವರ್ಣಸೌಧ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ

Spread the loveಬೆಳಗಾವಿ: ಕೇಂದ್ರ ಸರ್ಕಾರ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ