Breaking News

ರಾಜ್ಯದ 13 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

Spread the love

ಬೆಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 13 ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು, ಜೂ.7ರ ವರೆಗೆ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಹಳದಿ ಅಲರ್ಟ್‌ ಘೋಷಣೆ ಮಾಡಿದೆ.

ದಕ್ಷಿಣ ಕನ್ನಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ಯಾದಗಿರಿ, ರಾಯಚೂರು, ಶಿವಮೊಗ್ಗ, ಹಾಸನ, ಬಳ್ಳಾರಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.ರಾಜ್ಯದ 13 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ; ಜೂ.7ರ ವರೆಗೆ ಹಳದಿ ಅಲರ್ಟ್‌ ಎಚ್ಚರಿಕೆ

ಜೂ.7ರ ವರೆಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ.

ಬುಧವಾರ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಕರ್ನಾಟಕದ ಕರಾವಳಿಯಲ್ಲಿ ಸರ್ಕ್ಯೂಲೇಶನ್‌ 4.5 ಮತ್ತು 5.8 ಕಿ.ಮೀ ಎತ್ತರದಲ್ಲಿ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಜೂನ್‌ 6ರಿಂದ 8ರ ವರೆಗೆ ಹಗುರದಿಂದ ಸಾಧಾರಣವಾಗಿ ಗುಡುಗು ಮಿಂಚು ಸಮೇತ ಮಳೆಯಾಗಲಿದೆ. ಮಳೆಯ ಜತೆಗೆ ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿಯು ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್‌.ಪಾಟೀಲ್‌ ತಿಳಿಸಿದ್ದಾರೆ.


Spread the love

About Laxminews 24x7

Check Also

12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ 65ರ ವೃದ್ಧ

Spread the loveಕಾರವಾರ: ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆಘಾತಕಾರಿ ಪ್ರಕರಣ ಮುಂಡಗೋಡು ತಾಲೂಕಿನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ